Saturday, April 4, 2026

spot_img

ಪರಿಸರ ಸ್ನೇಹಿ ಪ್ರವಾಸೋದ್ಯಮಕ್ಕೆ ನೀಲನಕಾಶೆ ಸಿದ್ಧಪಡಿಸಲು ಸೂಚನೆ

ಉಡುಪಿ : ಪ್ರಕೃತಿದತ್ತ ಸೌಂದರ್ಯದಿಂದ ಪ್ರಸಿದ್ಧಿಯಾದ ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನು ಇನ್ನಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪರಿಸರ ಸ್ನೇಹಿ ಸಮಗ್ರ ನೀಲನಕಾಶೆ ಸಿದ್ಧಪಡಿಸಿ ಶೀಘ್ರವಾಗಿ ಪ್ರಸ್ತುತಪಡಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚಿಸಿದರು.

ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರವಾಸೋದ್ಯಮ ಪಾಲುದಾರರೊಂದಿಗೆ ನಡೆದ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಕಡಲತೀರಗಳು, ಪಶ್ಚಿಮ ಘಟ್ಟಗಳ ಪರ್ವತ ಶ್ರೇಣಿಗಳು, ಕಾಡು ಪ್ರದೇಶಗಳು, ಜಲಪಾತಗಳು ಹಾಗೂ ಧಾರ್ಮಿಕ ಕೇಂದ್ರಗಳು ಪ್ರಮುಖ ಆಕರ್ಷಣೆಗಳಾಗಿದ್ದು, ವರ್ಷದಿಂದ ವರ್ಷಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಳ್ಳುವ ಮೊದಲು ಕುಡಿಯುವ ನೀರು, ಶೌಚಾಲಯ, ಪಾರ್ಕಿಂಗ್, ವಸತಿ ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡುವಂತೆ ಸೂಚಿಸಿದರು.

ಜಿಲ್ಲೆಗೆ ಬರುವ ಬಹುತೇಕ ಪ್ರವಾಸಿಗರಿಗೆ ಸ್ಥಳೀಯ ಪ್ರವಾಸೋದ್ಯಮದ ಬಗ್ಗೆ ಮಾಹಿತಿ ಕೊರತೆಯಿರುವುದರಿಂದ ಫೇಸ್‌ಬುಕ್, ಇನ್‌ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಜಿಲ್ಲೆಯ ಸಂಸ್ಕೃತಿ, ಪರಂಪರೆ, ಆಹಾರ ಶೈಲಿ ಮತ್ತು ವೈಶಿಷ್ಟ್ಯತೆಗಳ ಸಮರ್ಪಕ ಪ್ರಚಾರಕ್ಕೆ ಒತ್ತು ನೀಡಬೇಕು ಎಂದು ಹೇಳಿದರು.

ಜಿಲ್ಲೆಯನ್ನು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ವಿಂಧ್ಯಾ ಎನ್.ಎಂ ಹಾಗೂ ವಿವಿಧ ಪ್ರವಾಸೋದ್ಯಮ ಪಾಲುದಾರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles