Friday, April 10, 2026

spot_img

ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ, ಮಾಹಿತಿ ಶಿಬಿರ

ಉಡುಪಿ : ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ಘಟಕ, ಜಿಲ್ಲಾ ಆಸ್ಪತ್ರೆಯ ಎನ್.ಸಿ.ಡಿ ವಿಭಾಗ ಸೇರಿದಂತೆ ವಿವಿಧ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ಮಾಹಿತಿ ಶಿಬಿರವನ್ನು ಆಯೋಜಿಸಲಾಯಿತು.

ಆರೋಗ್ಯಕ್ಕಾಗಿ ಒಟ್ಟಾಗಿ ವಿಜ್ಞಾನದೊಂದಿಗೆ ನಿಲ್ಲೋಣ ಎಂಬ ಘೋಷವಾಕ್ಯದೊಂದಿಗೆ ನಡೆದ ಈ ಶಿಬಿರವು ಊಪ್ಪರು ಡೈರಿಯಲ್ಲಿ ಮಂಗಳವಾರ ನಡೆಯಿತು. ಶಿಬಿರದಲ್ಲಿ ವಿವಿಧ ಆರೋಗ್ಯ ತಪಾಸಣೆಗಳು ಹಾಗೂ ಜಾಗೃತಿ ಕಾರ್ಯಕ್ರಮಗಳು ನಡೆದಿದ್ದು, ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೊಡವೂರು ರವಿರಾಜ ಹೆಗ್ಡೆ ಅವರು ಮಾತನಾಡಿ, ಜನರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಜಾಗೃತರಾಗಿದ್ದು, ಗುಣಮಟ್ಟದ ಆಹಾರ ಸೇವನೆ ಮತ್ತು ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು. ಆರೋಗ್ಯ ಇಲಾಖೆಯು ಇಂತಹ ಶಿಬಿರಗಳನ್ನು ನಿರಂತರವಾಗಿ ಆಯೋಜಿಸುವ ಮೂಲಕ ಜನಸಾಮಾನ್ಯರ ಆರೋಗ್ಯ ಕಾಪಾಡಲು ಮುಂದಾಗಬೇಕು ಎಂದರು.

ಜಿಲ್ಲಾ ಅಸಾಂಕ್ರಾಮಿಕ ರೋಗಗಳ ಕಾರ್ಯಕ್ರಮಾಧಿಕಾರಿ ಡಾ. ಲತಾ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿಯ ಕಾರ್ಯದರ್ಶಿ ಡಾ. ಮಾನಸ್ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ಜಿಲ್ಲಾ ಸರ್ಜನ್ ಡಾ. ಹೆಚ್. ಅಶೋಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹಾಲು ಒಕ್ಕೂಟದ ಉಪಾಧ್ಯಕ್ಷ ಉದಯ್ ಎಸ್. ಕೋಟ್ಯಾನ್, ಆದರ್ಶ ಆಸ್ಪತ್ರೆಯ ಕ್ಯಾನ್ಸರ್ ತಜ್ಞ ಡಾ. ಅನಂತ ಎಸ್. ಮಠದ್, ಪ್ರಸಾದ್ ನೇತ್ರಾಲಯದ ಡಾ. ಆಶಿಕ್, ಕೆ.ಎಂ.ಸಿ ಮಣಿಪಾಲದ ದಂತ ವೈದ್ಯಕೀಯ ವಿಭಾಗದ ಡಾ. ಪೂಜಾ, ಕೊಳಲಗಿರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ಸುರೇಶ್ ನಾಯಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಜಿಲ್ಲಾ ಕಾರ್ಯಕ್ರಮ ಸಂಯೋಜಕಿ ಡಾ. ಅಂಜಲಿ ಸ್ವಾಗತಿಸಿ, ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಕಾರ್ಯಕ್ರಮ ಸಂಯೋಜಕ ಶಶಿಧರ್ ಜೈನ್ ವಂದಿಸಿದರು.

ಈ ಸಂದರ್ಭದಲ್ಲಿ ಆರೋಗ್ಯ ಜಾಗೃತಿ ಭಿತ್ತಿಪತ್ರವನ್ನು ಬಿಡುಗಡೆಗೊಳಿಸಲಾಯಿತು. ಶಿಬಿರದಲ್ಲಿ ವಿವಿಧ ತಜ್ಞರು ಭಾಗವಹಿಸಿ ಆರೋಗ್ಯ ತಪಾಸಣೆ ನಡೆಸಿದ್ದು, ಸುಮಾರು 220 ಮಂದಿ ಫಲಾನುಭವಿಗಳು ಇದರ ಪ್ರಯೋಜನ ಪಡೆದುಕೊಂಡರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles