Wednesday, April 15, 2026

spot_img

23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..

ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ, 23 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬೆಂಗಳೂರು  ಶಿವನಗರ ನಿವಾಸಿ ಎಂ. ಬಾಬು (52) ಬಂಧಿತ ಆರೋಪಿ.

 ಉಡುಪಿ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ನ್ಯಾಯಾಲಯ ಪ್ರಕರಣ ಸಂಬಂಧಿಸಿದಂತೆ ಎಂ. ಬಾಬು ಹಲವು ವರ್ಷಗಳಿಂದ ತಪ್ಪಿಸಿಕೊಂಡಿದ್ದನು. ಈತನ ಪತ್ತೆಗಾಗಿ ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ಮಲ್ಪೆ ವೃತ್ತದ ಪೊಲೀಸ್ ನಿರೀಕ್ಷಕರ ಮಾರ್ಗದರ್ಶನದಲ್ಲಿ, ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕ ಅನೀಲ್ ಕುಮಾರ್ ಡಿ ನೇತೃತ್ವದಲ್ಲಿ ಕಳೆದ ಐದು ತಿಂಗಳಿನಿಂದ ವಿಶೇಷ ಕಾರ್ಯಾಚರಣೆ ನಡೆಸಲಾಗಿತ್ತು.

ಖಚಿತ ಮಾಹಿತಿ ಆಧರಿಸಿ ಠಾಣಾ ಸಿಬ್ಬಂದಿಗಳಾದ ಹೆಡ್ ಕಾನ್ಸ್‌ಟೇಬಲ್‌ಗಳಾದ ಸುರೇಶ್ ಕುಮಾರ್ ಮತ್ತು ವಿಶ್ವನಾಥ್ ಎಚ್. ಅವರು ಏಪ್ರಿಲ್ 12ರಂದು ಬೆಂಗಳೂರಿಗೆ ತೆರಳಿ, ಏಪ್ರಿಲ್ 14ರಂದು ರಾಮಮೂರ್ತಿ ನಗರದಲ್ಲಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದರು. ಬಂಧಿತನನ್ನು ಏಪ್ರಿಲ್ 15ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಏಪ್ರಿಲ್ 28ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles