Friday, April 24, 2026

spot_img

ದೇವಸ್ಥಾನ ಹುಂಡಿ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ..

ಉಡುಪಿ : ಆಜ್ರಿ ಗ್ರಾಮದ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆದ ಕಾಣಿಕೆ ಹುಂಡಿ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಮಲಶಿಲೆ ಗ್ರಾಮ ಎಳಬೇರು ಮಠದಮನೆ ಸಂದೀಪ ಆಚಾರಿ (28),  ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕು ಬನಹಟ್ಟಿ ಗ್ರಾಮ ಮುತ್ತಪ್ಪ ಶರಣಪ್ಪ ವಾಲಿಕರ್ (40) ಬಂಧಿತರು.

ಏಪ್ರಿಲ್ 20ರಂದು ಬೆಳಿಗ್ಗೆ 7:56ರ ಸುಮಾರಿಗೆ ಹೆಲ್ಮೆಟ್ ಧರಿಸಿದ ವ್ಯಕ್ತಿಯೊಬ್ಬ ದೇವಸ್ಥಾನದ ಹೊರ ಪೌಳಿಗೆ ಬಂದು ಹುಂಡಿಯನ್ನು ಕದ್ದೊಯ್ದಿದ್ದ ಘಟನೆ ನಡೆದಿತ್ತು. ಈ ಸಂಬಂಧ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆಯನ್ನು ಶಂಕರನಾರಾಯಣ ಠಾಣೆಯ ಪಿ.ಎಸ್.ಐ ಐ.ಆರ್. ಗಡ್ಡೇಕರ್, ಪಿ.ಎಸ್.ಐ ಅಕ್ಷಯ ಕುಮಾರಿ ಎಸ್.ಎನ್. ಹಾಗೂ ಸಿಬ್ಬಂದಿ ತಂಡ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳನ್ನು ಬಾಗಲಕೋಟೆ ಜಿಲ್ಲೆಯ ಇಳಕಲ್‌ನಲ್ಲಿ ಬಂಧಿಸಲಾಗಿದೆ.

ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಮೋಟಾರ್ ಸೈಕಲ್, 3 ಮೊಬೈಲ್ ಫೋನ್‌ಗಳು ಹಾಗೂ ಕಳವುಗೊಳಿಸಿದ ದೇವಸ್ಥಾನದ ಹುಂಡಿಯನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ ಅಂದಾಜು 1.50 ಲಕ್ಷ ರೂಪಾಯಿ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles