Wednesday, April 29, 2026

spot_img

ಉಡುಪಿ ಶ್ರೀಕೃಷ್ಣ ಮಠದಲ್ಲಿ ನೂತನ ಸರತಿ ಸಾಲು ವ್ಯವಸ್ಥೆ ಉದ್ಘಾಟನೆ

ಉಡುಪಿ : ಶ್ರೀಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠದ ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಅಂಗವಾಗಿ, ಉಡುಪಿ ಶ್ರೀಕೃಷ್ಣ ಮಠದ ರಥಬೀದಿ–ರಾಜಾಂಗಣ ರಾಜಮಾರ್ಗದಲ್ಲಿ ನೂತನವಾಗಿ ನವೀಕರಿಸಲಾದ ಶ್ರೀಕೃಷ್ಣ ದರ್ಶನ ಸರತಿ ಸಾಲು ವ್ಯವಸ್ಥೆ, ಮೇಲ್ಛಾವಣಿ ವ್ಯವಸ್ಥೆ ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆಯನ್ನು ಉದ್ಘಾಟಿಸಲಾಯಿತು.

ಕಾರ್ಯಕ್ರಮದಲ್ಲಿ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು, ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಹಾಗೂ ಅದಮಾರು ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಉಪಸ್ಥಿತರಿದ್ದು ಆಶೀರ್ವಚನ ನೀಡಿದರು.

ಭಕ್ತರಿಗೆ ಸುಗಮ ಹಾಗೂ ವ್ಯವಸ್ಥಿತ ದರ್ಶನ ಸೌಲಭ್ಯ ಒದಗಿಸುವ ಉದ್ದೇಶದಿಂದ ಸರತಿ ಸಾಲು ವ್ಯವಸ್ಥೆಯನ್ನು ನವೀಕರಿಸಲಾಗಿದ್ದು, ಭಕ್ತರ ಅನುಕೂಲಕ್ಕಾಗಿ ಮೇಲ್ಛಾವಣಿ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಜೊತೆಗೆ ವಿ.ಐ.ಪಿ ದರ್ಶನ ಹಾಗೂ ಸ್ಥಳೀಯ ಭಕ್ತರಿಗಾಗಿ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಜಾರಿಗೊಳಿಸಲಾಗಿದೆ.

ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನ ಉದಯ ಕುಮಾರ್ ಸರಳತ್ತಾಯ, ಪಾರುಪತ್ಯೆಗಾರ ಶ್ರೀಶ ಭಟ್ ಕಡೆಕಾರು ಹಾಗೂ ಉಭಯ ಮಠಗಳ ಶಿಷ್ಯ ವರ್ಗದವರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles