Thursday, May 7, 2026

spot_img

ಕುಂದಾಪುರ ಬಿಜೆಪಿ ಪೂರ್ವಭಾವಿ ಸಭೆ : ಬಿಎಸ್‌ವೈ ಅಭಿಮಾನೋತ್ಸವಕ್ಕೆ ಸಿದ್ಧತೆ

ಉಡುಪಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ರೈತಾಪಿ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಜೀವನದ ಐವತ್ತು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ನಡೆಯಲಿರುವ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ ತೆರಳುವ ಕುರಿತು ಪೂರ್ವಭಾವಿ ಸಭೆ ಬುಧವಾರ ಕುಂದಾಪುರ ಬಿಜೆಪಿ ಕಚೇರಿಯಲ್ಲಿ ನಡೆಯಿತು.

ಕುಂದಾಪುರ ಬಿಜೆಪಿ ಕ್ಷೇತ್ರಾಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಹಿನ್ನಲೆಯಲ್ಲಿ ಪಕ್ಷದ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದರು. ಪಂಚರಾಜ್ಯಗಳ ಚುನಾವಣೆಯಲ್ಲಿ ಕಮಲ ಅರಳಿರುವುದು ದೇಶದ ಕಾರ್ಯಕರ್ತರ ಗೆಲುವಾಗಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಲಾಯಿತು. ಇದೇ ವೇಳೆ ಪಕ್ಷದ ಮುಂದಿನ ಕಾರ್ಯಕ್ರಮಗಳು ಹಾಗೂ ಸಂಘಟನಾ ಚಟುವಟಿಕೆಗಳ ಕುರಿತೂ ಚರ್ಚೆ ನಡೆಯಿತು.

ಮಂಡಲ ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ.ಎಸ್. ಸ್ವಾಗತಿಸಿದರು. ಓಬಿಸಿ ಮೋರ್ಚಾ ಅಧ್ಯಕ್ಷ ಸುರೇಂದ್ರ ಕಾಂಚನ್ ವಂದಿಸಿದರು. ವೇದಿಕೆಯಲ್ಲಿ ಮಂಡಲ ನಿಕಟ ಪೂರ್ವ ಅಧ್ಯಕ್ಷ ಶಂಕರ ಅಂಕದಕಟ್ಟೆ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಕಾಡೂರು ಸುರೇಶ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು ಹಾಗೂ ಮಂಡಲ ಉಪಾಧ್ಯಕ್ಷ ಪ್ರಕಾಶ್ ಜಿ. ಪೂಜಾರಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಬೀಜಾಡಿ ಮೀನುಗಾರಿಕಾ ಸೊಸೈಟಿಯ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ನಾಗೇಶ್ ಬೀಜಾಡಿ ಅವರನ್ನು ಭಾರತೀಯ ಜನತಾ ಪಾರ್ಟಿ ವತಿಯಿಂದ ಸನ್ಮಾನಿಸಲಾಯಿತು. ಸಭೆಯಲ್ಲಿ ಮಂಡಲದ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles