Wednesday, May 27, 2026

spot_img

ತೆಂಕನಿಡಿಯೂರಿನಲ್ಲಿ ಮಸಾಲೆ ಪುಡಿ ತಯಾರಿಕಾ ತರಬೇತಿ ಸಮಾರೋಪ

ಉಡುಪಿ: ಭಾರತೀಯ ವಿಕಾಸ ಟ್ರಸ್ಟ್, ತೆಂಕನಿಡಿಯೂರು ಗ್ರಾಮ ಪಂಚಾಯತ್ ಹಾಗೂ ಪ್ರಗತಿ ಸಂಜೀವಿನಿ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ತೆಂಕನಿಡಿಯೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಆರು ದಿನಗಳ ಮಸಾಲೆ ಪುಡಿ ತಯಾರಿಕಾ ತರಬೇತಿ ಕಾರ್ಯಕ್ರಮ ಯಶಸ್ವಿಯಾಗಿ ಸಂಪನ್ನಗೊಂಡಿತು.

ಸಮಾರೋಪ ಸಮಾರಂಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಯಾನಂದ ಬೆನ್ನೂರು ಮಾತನಾಡಿ, ಮಹಿಳೆಯರು ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ಇಂತಹ ಕೌಶಲ್ಯಾಭಿವೃದ್ಧಿ ತರಬೇತಿಗಳು ಸಹಕಾರಿಯಾಗುತ್ತವೆ ಎಂದು ಹೇಳಿದರು. ಬಳಿಕ ತರಬೇತಿಯಲ್ಲಿ ಭಾಗವಹಿಸಿದ್ದ ಮಹಿಳೆಯರಿಗೆ ಪ್ರಮಾಣಪತ್ರಗಳನ್ನು ವಿತರಿಸಿದರು.

ಡಿಆರ್‌ಪಿ ರೂಪಶ್ರೀ ಅವರು ಪಿಎಂಎಫ್‌ಎಂಇ ಯೋಜನೆ ಕುರಿತು ಮಾಹಿತಿ ನೀಡಿದರು. ಕೃಷಿ ಇಲಾಖೆಯ ಬ್ಲಾಕ್ ಮ್ಯಾನೇಜರ್ ಸಂಜನಾ ಅವರು ರೈತರಿಗೆ ಸರ್ಕಾರದಿಂದ ದೊರೆಯುವ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳ ಬಗ್ಗೆ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮೋಹಿನಿ ಪೆರ್ಡೂರು ಹಾಗೂ ಭಾರತೀಯ ವಿಕಾಸ ಟ್ರಸ್ಟ್‌ನ ಕಾರ್ಯಕ್ರಮ ಅಧಿಕಾರಿ ಪ್ರತಿಮಾ ಉಪಸ್ಥಿತರಿದ್ದರು. ಒಟ್ಟು 29 ಮಹಿಳೆಯರು ತರಬೇತಿಯ ಪ್ರಯೋಜನ ಪಡೆದುಕೊಂಡರು. ರಾಧಾ ಹಾಗೂ ಸಂಜನಾ ಕಾರ್ಯಕ್ರಮ ನಿರೂಪಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles