Wednesday, May 27, 2026

spot_img

ಮೇ 31ರಂದು ಯಕ್ಷಗಾನ ಕಲಾವಿದರ ವಾರ್ಷಿಕ ಸಮಾವೇಶ

ಉಡುಪಿ: ಯಕ್ಷಗಾನ ಕಲಾರಂಗ ಕಳೆದ 26 ವರ್ಷಗಳಿಂದ ಆಯೋಜಿಸುತ್ತಿರುವ ಯಕ್ಷಗಾನ ಕಲಾವಿದರ ವಾರ್ಷಿಕ ಸಮಾವೇಶವು ಮೇ 31ರಂದು ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ, ಪರ್ಯಾಯ ಶೀರೂರು ಮಠ ಆಶ್ರಯದಲ್ಲಿ ದಿನಪೂರ್ತಿ ನಡೆಯಲಿದೆ. ಬೆಳಿಗ್ಗೆ 9 ಗಂಟೆಯಿಂದ ಕಸ್ತೂರ್ಬಾ ಮೆಡಿಕಲ್ ಕಾಲೇಜು, ಮಣಿಪಾಲದ ವೈದ್ಯರಿಂದ ಕಲಾವಿದರ ವೈದ್ಯಕೀಯ ತಪಾಸಣೆ ನಡೆಯಲಿದೆ. ಬೆಳಿಗ್ಗೆ 10.30ಕ್ಕೆ ಶೀರೂರು ಮಠದ ದಿವಾನರಾದ ಡಾ. ಉದಯ ಕುಮಾರ್ ಸರಳತ್ತಾಯ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ.

ಬಳಿಕ ಕಲಾಮಂಡಲಂ ನಂದಕುಮಾರ್ ಮತ್ತು ತಂಡದವರಿಂದ ‘ಕಲ್ಯಾಣ ಸೌಗಂಧಿಕಂ’ ತುಳ್ಳಲ್ ತ್ರಯಮ್ ಪ್ರದರ್ಶನ ನಡೆಯಲಿದೆ. ಮಧ್ಯಾಹ್ನ 12 ಗಂಟೆಯಿಂದ “ಕಲೆ-ಕಲಾವಿದ-ಪ್ರೇಕ್ಷಕ : ಸಮನ್ವಯ” ವಿಷಯದ ಕುರಿತು ಕಲಾವಿದರ ಚರ್ಚಾಸಭೆ ನಡೆಯಲಿದ್ದು, ಅರ್ಥಧಾರಿ ಹಾಗೂ ಪ್ರಸಂಗಕರ್ತ ಪವನ್ ಕಿರಣ್‌ಕೆರೆ ಸಮನ್ವಯಕಾರರಾಗಿರುತ್ತಾರೆ. ಅಪರಾಹ್ನ 2.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಪರ್ಯಾಯ ಶೀರೂರು ಮಠಾಧೀಶರಾದ ಶ್ರೀ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಆಶೀರ್ವಚನ ನೀಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ನಾಡೋಜ ಡಾ. ಜಿ. ಶಂಕರ್ ವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಶುಭಾಶಂಸನೆಗೈಯಲಿದ್ದು, ಸಂಸದ ಕೋಟ ಶ್ರೀನಿವಾಸ ಪೂಜಾರಿ ಕಲಾವಿದರಿಗೆ ಉಡುಗೊರೆ ವಿತರಿಸಲಿದ್ದಾರೆ. ಶಾಸಕ ಯಶ್‌ಪಾಲ್ ಸುವರ್ಣ ಗೃಹ ನಿರ್ಮಾಣ ಸಹಾಯದ ಉಡುಗೊರೆ ವಿತರಿಸಲಿದ್ದಾರೆ. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ ಗಂಟಿಹೊಳೆ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಮಾವೇಶದಲ್ಲಿ ಯಕ್ಷನಿಧಿಯ ಸದಸ್ಯರಾಗಿರುವ ಸುಮಾರು 1000 ವೃತ್ತಿಮೇಳದ ಕಲಾವಿದರು ಪಾಲ್ಗೊಳ್ಳಲಿದ್ದು, ವೈದ್ಯಕೀಯ ನೆರವು ಹಾಗೂ ಗೃಹ ನಿರ್ಮಾಣ ಸಹಾಯ ವಿತರಣೆ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಮತ್ತು ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles