ಉಡುಪಿ : ಮೀನು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನದ ಟಯರ್ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಫುಟ್‌ಪಾತ್ ಮೇಲೆ ವಾಹನ ಏರಿದ ಘಟನೆ ಹಿರಿಯಡಕ ಪೇಟೆ ಸಮೀಪನಡೆದಿದೆ.

ಮಲ್ಪೆಯಿಂದ ಸಾಗರದ ಕಡೆಗೆ ಮೀನು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವು ವೇಗವಾಗಿ ಸಂಚರಿಸುತ್ತಿದ್ದ ವೇಳೆ ಹಿರಿಯಡಕ ಸಮೀಪಿಸುತ್ತಿದ್ದಾಗ ಏಕಾಏಕಿ ಟಯರ್ ಸ್ಫೋಟಗೊಂಡಿದೆ. ಪರಿಣಾಮ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಫುಟ್‌ಪಾತ್ ಮೇಲೆ ಏರಿದೆ. ಅಪಘಾತದ ತೀವ್ರತೆಗೆ ವಾಹನದಲ್ಲಿದ್ದ ಮೀನಿನ ಬಾಕ್ಸ್‌ಗಳು ರಸ್ತೆಗೆ ಬಿದ್ದು, ಮೀನುಗಳು ಚೆಲ್ಲಾಪಿಲ್ಲಿಯಾಗಿವೆ. ಘಟನೆಯಿಂದ ಕೆಲಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾದರೂ, ಯಾವುದೇ ದೊಡ್ಡ ಅನಾಹುತ ಸಂಭವಿಸಿಲ್ಲ.

ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರಾಗಿದ್ದು, ಯಾವುದೇ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಘಟನೆಯ ಬಳಿಕ ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ ವಾಹನವನ್ನು ಸುರಕ್ಷಿತವಾಗಿ ತೆರವುಗೊಳಿಸಿದರು. ಅಪಘಾತದಿಂದ ವಾಹನಕ್ಕೆ ಹಾನಿಯಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.



