Friday, June 5, 2026

spot_img

ಕರ್ಕುಂಜೆ ಮನೆ ಕಳ್ಳತನ ಪ್ರಕರಣ, 11 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ವಶ; ಇಬ್ಬರು ಆರೋಪಿಗಳ ಬಂಧನ

ಉಡುಪಿ : ಕರ್ಕುಂಜೆ ಗ್ರಾಮದ ನೇರಳಕಟ್ಟೆಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಕುಂದಾಪುರ ಗ್ರಾಮಾಂತರ ಪೊಲೀಸರು ಭೇದಿಸಿದ್ದು, ಸುಮಾರು 11 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಂತ್ರಾಡಿ ಬಾಯರಬೆಟ್ಟು, ಕಾಡೂರು ಗ್ರಾಮದ ವಿಜಯ ಶೆಟ್ಟಿ (32), ಕಾರ್ಕಳ ತಾಲೂಕಿನ ಇಂದಾರು ನಿವಾಸಿ ಅರ್ಜುನ ಪೂಜಾರಿ (29) ಬಂಧಿತ ಆರೋಪಿಗಳು, ಪ್ರಮುಖ ಆರೋಪಿ ಮೊಹಮ್ಮದ್ ಅಶ್ರಫ್ ತಲೆಮರೆಸಿಕೊಂಡಿದ್ದಾನೆ

 ಕರ್ಕುಂಜೆ ಗ್ರಾಮದ ನೇರಳಕಟ್ಟೆಯ ನಿವಾಸಿ ನಿರಂಜನ್ ಭಟ್ ಅವರ ಮನೆಯಲ್ಲಿ ಮೇ 23ರಂದು ಕಳ್ಳತನ ನಡೆದಿತ್ತು. ಮನೆಯವರು ಹೊರಗಿದ್ದ ವೇಳೆ ದುಷ್ಕರ್ಮಿಗಳು ಮನೆಯ ಬಾಗಿಲಿನ ಬೀಗ ಒಡೆದು ಒಳನುಗ್ಗಿ, ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ನಗದು ಹಣವನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ನೀಡಲಾದ ದೂರಿನ ಆಧಾರದಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.

ಪೊಲೀಸ್ ಉಪಾಧೀಕ್ಷಕ ಎಚ್.ಡಿ. ಕುಲಕರ್ಣಿ ಹಾಗೂ ಪೊಲೀಸ್ ವೃತ್ತ ನಿರೀಕ್ಷಕ ಸಂತೋಷ್ ಎ. ಕಾಯ್ಕಿಣಿ ಅವರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ತನಿಖೆ ನಡೆಸಿ, ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳಲ್ಲಿ ವಿಜಯ ಶೆಟ್ಟಿ (32) ಯಿಂದ ಸುಮಾರು 9 ಲಕ್ಷ ಮೌಲ್ಯದ 66.22 ಗ್ರಾಂ ಚಿನ್ನಾಭರಣ ಹಾಗೂ 175.4 ಗ್ರಾಂ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮತ್ತೊಬ್ಬ ಆರೋಪಿ ಅರ್ಜುನ ಪೂಜಾರಿ (29) ನಿಂದ ಸುಮಾರು 2 ಲಕ್ಷ ಮೌಲ್ಯದ 18.200 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಅಶ್ರಫ್ ತಲೆಮರೆಸಿಕೊಂಡಿದ್ದಾನೆ. ಆತನ ಪತ್ತೆ ಹಾಗೂ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ. ಪ್ರಕರಣದ ತನಿಖೆ ಮತ್ತು ಆರೋಪಿಗಳ ಬಂಧನ ಕಾರ್ಯಾಚರಣೆಯಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ವಿವಿಧ ಠಾಣೆಗಳ ಸಿಬ್ಬಂದಿ ಪಾಲ್ಗೊಂಡಿದ್ದರು. ಕಳ್ಳತನ ಪ್ರಕರಣವನ್ನು ಅಲ್ಪಾವಧಿಯಲ್ಲೇ ಭೇದಿಸಿ ಕಳುವಾದ ಬಹುತೇಕ ಸ್ವತ್ತುಗಳನ್ನು ವಶಪಡಿಸಿಕೊಂಡಿರುವ ಕುಂದಾಪುರ ಗ್ರಾಮಾಂತರ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕ ವಲಯದಿಂದ ಮೆಚ್ಚುಗೆ ವ್ಯಕ್ತವಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles