Saturday, June 6, 2026

spot_img

ಸಾಂಕ್ರಾಮಿಕ ರೋಗಗಳ ತಡೆಗೆ ಜನಜಾಗೃತಿ ಅಗತ್ಯ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ : ಮುಂಗಾರು ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಡೆಂಗ್ಯೂ, ಮಲೇರಿಯಾ, ಚಿಕೂನ್‌ಗುನ್ಯಾ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಿದ್ದು, ಜನಸಾಮಾನ್ಯರಲ್ಲಿ ರೋಗಗಳ ತಡೆ ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತು ವ್ಯಾಪಕ ಅರಿವು ಮೂಡಿಸುವ ಕಾರ್ಯವನ್ನು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚನೆ ನೀಡಿದರು.

 ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಡೆಂಗ್ಯೂ-ಮಲೇರಿಯಾ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಳೆಯ ನೀರು ವಿವಿಧೆಡೆ ನಿಂತು ಸೊಳ್ಳೆಗಳ ಸಂತಾನೋತ್ಪತ್ತಿಗೆ ಕಾರಣವಾಗುವುದರಿಂದ ಡೆಂಗ್ಯೂ, ಮಲೇರಿಯಾ, ಫೈಲೇರಿಯಾ ಹಾಗೂ ಚಿಕೂನ್‌ಗುನ್ಯಾ ಮುಂತಾದ ರೋಗಗಳು ಹರಡುವ ಅಪಾಯವಿದೆ. ಆರೋಗ್ಯ ಇಲಾಖೆ, ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿಗಳು ಸಮುದಾಯದ ಸಹಭಾಗಿತ್ವದೊಂದಿಗೆ ರೋಗ ನಿಯಂತ್ರಣ ಕಾರ್ಯಕ್ಕೆ ಮುಂದಾಗಬೇಕು ಎಂದು ಅವರು ಹೇಳಿದರು.

ಕಳೆದ ಕೆಲವು ವರ್ಷಗಳಿಂದ ನಗರ ಪ್ರದೇಶಗಳಲ್ಲಿ ಡೆಂಗ್ಯೂ ಮತ್ತು ಚಿಕೂನ್‌ಗುನ್ಯಾ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದ್ದು, ನಗರಸಭೆಗಳು ಹಾಗೂ ಸ್ಥಳೀಯ ಸಂಸ್ಥೆಗಳು ಮಳೆಯ ನೀರು ಸರಾಗವಾಗಿ ಹರಿದು ಹೋಗುವಂತೆ ಕ್ರಮ ಕೈಗೊಳ್ಳಬೇಕು. ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಸ್ವಯಂಸೇವಕರ ತಂಡಗಳು ಮನೆಮನೆಗೆ ಭೇಟಿ ನೀಡಿ ಸೊಳ್ಳೆ ಉತ್ಪತ್ತಿ ತಾಣಗಳನ್ನು ಗುರುತಿಸಿ ನಿರ್ಮೂಲನೆಗೊಳಿಸಬೇಕು ಎಂದು ಹೇಳಿದರು.

ಹೊರ ಜಿಲ್ಲೆ ಹಾಗೂ ರಾಜ್ಯಗಳಿಂದ ಆಗಮಿಸುವ ಕಾರ್ಮಿಕರಿಂದಲೂ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಕಟ್ಟಡ ನಿರ್ಮಾಣ ಸಂಸ್ಥೆಗಳು ಮತ್ತು ಗುತ್ತಿಗೆದಾರರಿಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು. ಕಾರ್ಮಿಕರ ಆರೋಗ್ಯ ತಪಾಸಣೆಗೆ ಸಹ ಆದ್ಯತೆ ನೀಡಬೇಕು ಎಂದರು.

ಸಭೆಯಲ್ಲಿ ಪೌರಾಯುಕ್ತ ಮಹಾಂತೇಶ್ ಹಂಗರಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಪ್ರಶಾಂತ್ ಭಟ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles