ಉಡುಪಿ : ಹೆಬ್ರಿ ತಾಲೂಕಿನ ಬೆಳ್ವೆ ಗ್ರಾಮದ ದೇವಸ್ಥಾನಬೆಟ್ಟು ಕೊರಗ ಕಾಲೋನಿಯಲ್ಲಿ ನಿರ್ಮಿಸಲಾಗಿರುವ ಮಲ್ಟಿ ಪರ್ಪಸ್ ಸೆಂಟರ್ಗೆ ಕುಂದಾಪುರ ಕ್ಷೇತ್ರದ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೋಮವಾರ ಭೇಟಿ ನೀಡಿ ವೀಕ್ಷಣೆ ನಡೆಸಿದರು.

ಕೇಂದ್ರದಲ್ಲಿರುವ ಮೂಲಸೌಕರ್ಯಗಳು ಹಾಗೂ ಸಾರ್ವಜನಿಕರಿಗೆ ಕಲ್ಪಿಸಲಾಗಿರುವ ಸೌಲಭ್ಯಗಳ ಕುರಿತು ಮಾಹಿತಿ ಪಡೆದುಕೊಂಡ ಅವರು, ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಿದರು.

ಬಳಿಕ ತಾಯಿಗಾಗಿ ಒಂದು ಗಿಡ ಅಭಿಯಾನದ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಸಿ ನೆಟ್ಟರು. ಪರಿಸರ ಸಂರಕ್ಷಣೆಯ ಮಹತ್ವವನ್ನು ತಿಳಿಸಿದ ಅವರು, ಪ್ರತಿಯೊಬ್ಬರೂ ಗಿಡ ನೆಟ್ಟು ಪೋಷಿಸುವ ಮೂಲಕ ಹಸಿರು ಪರಿಸರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮಸ್ಥರು ಹಾಗೂ ಮುಖಂಡರು ಉಪಸ್ಥಿತರಿದ್ದರು.



