ಉಡುಪಿ : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಕೊಲ್ಲೂರು ಕ್ಷೇತ್ರಕ್ಕೆ ಆಗಮಿಸುತ್ತಿರುವ ವಿಜಯ್ ಅವರು ಮಧ್ಯಾಹ್ನ ಸುಮಾರು 3 ಗಂಟೆಗೆ ದೇವಸ್ಥಾನಕ್ಕೆ ಆಗಮಿಸಿ ದೇವಿ ಮೂಕಾಂಬಿಕೆಯ ದರ್ಶನ ಪಡೆಯಲಿದ್ದಾರೆ. ಬೈಂದೂರು ತಾಲೂಕಿನಲ್ಲಿರುವ ಕೊಲ್ಲೂರು ಕ್ಷೇತ್ರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಅವರು ಸಂಜೆ ಮಂಗಳೂರಿಗೆ ತೆರಳಿ, ಅಲ್ಲಿಂದ ವಿಮಾನದ ಮೂಲಕ ಚೆನ್ನೈಗೆ ಪ್ರಯಾಣ ಬೆಳೆಸಲಿದ್ದಾರೆ.

ಮುಖ್ಯಮಂತ್ರಿಯವರ ಭೇಟಿ ಹಿನ್ನೆಲೆಯಲ್ಲಿ ದೇವಸ್ಥಾನ ಹಾಗೂ ಪೊಲೀಸ್ ಇಲಾಖೆ ಅಗತ್ಯ ಭದ್ರತಾ ಮತ್ತು ವ್ಯವಸ್ಥಾಪನಾ ಸಿದ್ಧತೆಗಳನ್ನು ಕೈಗೊಂಡಿವೆ. ವಿಜಯ್ ಅವರ ಆಗಮನದ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಭಕ್ತರು ಹಾಗೂ ಅಭಿಮಾನಿಗಳ ಸಂಚಾರ ಹೆಚ್ಚುವ ಸಾಧ್ಯತೆ ಇದೆ.



