Monday, June 29, 2026

spot_img

ಶಾಸಕರ ಪ್ರದೇಶ ಅಭಿವೃದ್ಧಿ ನಿಧಿಯಿಂದ ಪೊಲೀಸ್ ಇಲಾಖೆಗೆ ಬೊಲೆರೊ ಜೀಪ್ ಹಸ್ತಾಂತರ

ಉಡುಪಿ : ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಸುನೀಲ್ ಕುಮಾರ್ ಅವರು ತಮ್ಮ ಕ್ಷೇತ್ರ ಪ್ರದೇಶ ಅಭಿವೃದ್ಧಿ ನಿಧಿಯಡಿ ಖರೀದಿಸಲಾದ ಮಹೀಂದ್ರ ಬೊಲೆರೊ ಜೀಪ್ ಅನ್ನು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಹಸ್ತಾಂತರಿಸಿದರು. ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಸುನೀಲ್ ಕುಮಾರ್ ಅವರು ಜೀಪಿನ ಕೀಯನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್, ಐಪಿಎಸ್ ಅವರಿಗೆ ಅಧಿಕೃತವಾಗಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಉಪಾಧೀಕ್ಷಕ ತಿಮ್ಮಪ್ಪ ಗೌಡ, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ನಿರೀಕ್ಷಕ ರವಿ ಕುಮಾರ್, ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯ ಸಹಾಯಕ ಆಡಳಿತ ಅಧಿಕಾರಿ ಗೋಪಾಲ್ ಸೇರಿದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಶಾಸಕರ ಪ್ರದೇಶ ಅಭಿವೃದ್ಧಿ ನಿಧಿಯಡಿ ನೀಡಲಾದ ಈ ಹೊಸ ವಾಹನವು ಜಿಲ್ಲೆಯ ಪೊಲೀಸ್ ಇಲಾಖೆಯ ಕಾರ್ಯನಿರ್ವಹಣೆಗೆ ನೆರವಾಗಲಿದ್ದು, ಕಾನೂನು-ಸುವ್ಯವಸ್ಥೆ ಕಾಪಾಡುವ ಕಾರ್ಯ ಹಾಗೂ ತುರ್ತು ಸೇವೆಗಳ ನಿರ್ವಹಣೆಯಲ್ಲಿ ಮತ್ತಷ್ಟು ಅನುಕೂಲವಾಗಲಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles