Wednesday, July 15, 2026

spot_img

ಹೃದಯಾಘಾತದಿಂದ ವಿಜಯ ಕರ್ನಾಟಕ ವರದಿಗಾರ ನಾಗೇಶ್ ಗಾಣಿಗ ನಿಧನ

ಉಡುಪಿ : ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ವಿಜಯ ಕರ್ನಾಟಕ ದಿನಪತ್ರಿಕೆಯ ಸಿದ್ದಾಪುರ ಭಾಗದ ವರದಿಗಾರ ನಾಗೇಶ್ ಗಾಣಿಗ ನೇರಳಕಟ್ಟೆ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಹಲವಾರು ವರ್ಷಗಳಿಂದ ವಿಜಯ ಕರ್ನಾಟಕದ ವರದಿಗಾರರಾಗಿ ಸೇವೆ ಸಲ್ಲಿಸಿದ್ದ ನಾಗೇಶ್ ಗಾಣಿಗ ಅವರು, ಗ್ರಾಮೀಣ ಪ್ರದೇಶಗಳ ಜನಸಮಸ್ಯೆಗಳನ್ನು ತಮ್ಮ ವರದಿಗಳ ಮೂಲಕ ಪರಿಣಾಮಕಾರಿಯಾಗಿ ಬೆಳಕಿಗೆ ತಂದು, ಅನೇಕ ಸಮಸ್ಯೆಗಳ ಪರಿಹಾರಕ್ಕೂ ಕಾರಣರಾಗಿದ್ದರು. ಜನಪರ ಕಾಳಜಿ, ನಿಷ್ಠಾವಂತ ವರದಿಗಾರಿಕೆ ಹಾಗೂ ಸರಳ ವ್ಯಕ್ತಿತ್ವದಿಂದ ಅವರು ಸಹೋದ್ಯೋಗಿಗಳು ಮತ್ತು ಸಾರ್ವಜನಿಕರ ಗೌರವಕ್ಕೆ ಪಾತ್ರರಾಗಿದ್ದರು.

ಮಾಹಿತಿಯ ಪ್ರಕಾರ, ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ನಾಗೇಶ್ ಗಾಣಿಗ ಅವರ ಅಕಾಲಿಕ ನಿಧನಕ್ಕೆ ಪತ್ರಕರ್ತರು, ಸಾರ್ವಜನಿಕರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಪಾರ್ಥಿವ ಶರೀರವನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಅಪಾರ ಬಂಧು-ಬಳಗ, ಸ್ನೇಹಿತರು ಹಾಗೂ ಅಭಿಮಾನಿಗಳನ್ನು ಅವರು ಅಗಲಿದ್ದಾರೆ. ಅವರ ಅಗಲಿಕೆ ಕುಂದಾಪುರ ಭಾಗದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ತುಂಬಲಾರದ ಶೂನ್ಯವನ್ನು ಉಂಟುಮಾಡಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles