Monday, July 27, 2026

spot_img

ಟೈಮಿಂಗ್ ವಿಚಾರಕ್ಕೆ ಎರಡು ಖಾಸಗಿ ಬಸ್ ಸಿಬ್ಬಂದಿ ನಡುವೆ ಘರ್ಷಣೆ; ನಾಲ್ವರ ಬಂಧನ

ಉಡುಪಿ : ಬಸ್‌ಗಳ ಟೈಮಿಂಗ್ ವಿಚಾರವಾಗಿ ಎರಡು ಖಾಸಗಿ ಬಸ್‌ಗಳ ಚಾಲಕರು ಮತ್ತು ನಿರ್ವಾಹಕರ ನಡುವೆ ಸಾರ್ವಜನಿಕ ಸ್ಥಳದಲ್ಲೇ ಘರ್ಷಣೆ ನಡೆದ ಘಟನೆ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.

ಕಾಪು ಪಡು ಗ್ರಾಮದ ಕಾಪು ಹೊಸ ಮಾರಿಗುಡಿ ಅಂಡರ್‌ಪಾಸ್ ಸಮೀಪದ ಬಸ್ ನಿಲ್ದಾಣದ ಎದುರು ಬೆಳಿಗ್ಗೆ ಸುಮಾರು 9.27ರ ವೇಳೆಗೆ ಸಂದೇಶ್ ಬಸ್ ಹಾಗೂ ಆನಂದ್ ಬಸ್ ಸಿಬ್ಬಂದಿ ನಡುವೆ ಟೈಮಿಂಗ್ ವಿಚಾರಕ್ಕೆ ವಾಗ್ವಾದ ಉಂಟಾಗಿ, ಪರಸ್ಪರ ಬಸ್‌ಗಳನ್ನು ತಾಗಿಸಿಕೊಂಡು ಕೈಕೈ ಮಿಲಾಯಿಸಿಕೊಂಡಿದ್ದಾರೆ. ಅಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡು ಸಾರ್ವಜನಿಕರ ಶಾಂತಿ ಮತ್ತು ನೆಮ್ಮದಿಗೆ ಭಂಗ ಉಂಟುಪಡಿಸಿದ್ದಾರೆ.

ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಚಾಲಕರಾದ ರಮೇಶ್ ಹಾಗೂ ಅಭಿಷೇಕ್, ನಿರ್ವಾಹಕರಾದ ವಿಜಯಕುಮಾರ್ ಮತ್ತು ಹರೀಶ್ ಬಿ. ಹೆಗ್ಡೆ ಅವರನ್ನು ಪೊಲೀಸರು ವಶಕ್ಕೆ ಪಡೆದು, ಘರ್ಷಣೆಗೆ ಬಳಸಲಾದ ಎರಡೂ ಬಸ್‌ಗಳನ್ನು ಜಪ್ತಿ ಮಾಡಿದ್ದಾರೆ. ಪ್ರಕರಣದ ಕುರಿತು ಕಾಪು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles