Friday, July 31, 2026

spot_img

ರಾಹುಲ್ ಗಾಂಧಿ ವಿರುದ್ಧ ಹೇಳಿಕೆ ಖಂಡನೆ: ಯಶ್‌ಪಾಲ್ ಸುವರ್ಣ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಉಡುಪಿ : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹಾಗೂ ದ್ವೇಷ ಭಾಷಣ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ನಗರದ ಹಳೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಶಾಸಕ ಯಶ್‌ಪಾಲ್ ಸುವರ್ಣ ನೀಡಿದ ಹೇಳಿಕೆ ಸಮಾಜದಲ್ಲಿ ದ್ವೇಷ ಹರಡುವಂತಿದ್ದು, ಅವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯ ವೇಳೆ ಕಾರ್ಯಕರ್ತರು ಶಾಸಕ ಯಶ್‌ಪಾಲ್ ಸುವರ್ಣ ಅವರ ಪ್ರತಿಕೃತಿಗೆ ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಪ್ರತಿಕೃತಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದರು.

ಕಾಂಗ್ರೆಸ್ ಮುಖಂಡರು ಮಾತನಾಡಿ, ಜನಪ್ರತಿನಿಧಿಗಳು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಸಾರ್ವಜನಿಕ ವೇದಿಕೆಯಲ್ಲಿ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಟೀಕಿಸಿದರು. ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಈಗಾಗಲೇ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ಕಾನೂನು ಎಲ್ಲರಿಗೂ ಸಮಾನವಾಗಿರುವುದರಿಂದ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧವೂ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರಾದ ಸುಧೀರ್ ಮರೋಳಿ, ನಿಖಿತ್ ರಾಜ್ ಮೌರ್ಯ ಪ್ರತಿಭಟನಾ ಭಾಷಣ ಮಾಡಿ ಸರ್ಕಾರ ಹಾಗೂ ಪೊಲೀಸ್ ಇಲಾಖೆಯನ್ನು ತರಾಟೆಗೆ ತೆಗೆದುಕೊಂಡರು.

ಪ್ರತಿಭಟನೆಯಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಜಿಲ್ಲಾ ಕಾಂಗ್ರೆಸ್ ಮುಖಂಡರು, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles