ಉಡುಪಿ : ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮನವಿ ಸಲ್ಲಿಸಲಾಯಿತು. ವಾಲ್ಮೀಕಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರ ವಿರುದ್ಧ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಶ್ರೀಕಾಂತ್ ನಾಯಕ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಉಪಾಧ್ಯಕ್ಷ ಪೃಥ್ವಿರಾಜ್ ಮಣಿಪಾಲ್, ಪ್ರಧಾನ ಕಾರ್ಯದರ್ಶಿ ಅಭಿರಾಜ್ ಸುವರ್ಣ, ಜಿಲ್ಲಾ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ರತ್ನಾಕರ ಇಂದ್ರಾಳಿ, ಜಿಲ್ಲಾ ಎಸ್‌ಟಿ ಮೋರ್ಚಾ ಅಧ್ಯಕ್ಷ ಭುಜಂಗ ನಾಯ್ಕ್, ಜಿಲ್ಲಾ ಕೈಗಾರಿಕಾ ಪ್ರಕೋಷ್ಠದ ಸಂಚಾಲಕ ಸದಾನಂದ ಪ್ರಭು ಸೇರಿದಂತೆ ವಿವಿಧ ಸ್ತರದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.




