Monday, September 21, 2026

spot_img

ಅಂಬೇಡ್ಕರ್ ಪ್ರಬುದ್ಧ ಚಿಂತನೆ ನೀಡಿದವರು: ಡಾ. ಗಣನಾಥ ಎಕ್ಕಾರು

ಉಡುಪಿ : ಡಾ. ಬಿ.ಆರ್. ಅಂಬೇಡ್ಕರ್ ಅವರು ತಮ್ಮ ಜೀವನದ ಪ್ರತಿಯೊಂದು ಹಂತದಲ್ಲೂ ಅಸಮಾನತೆಯನ್ನು ಎದುರಿಸಿ, ಪ್ರಬುದ್ಧ ಚಿಂತನೆಯ ಮೂಲಕ ಸಂವಿಧಾನ ರಚಿಸಿ ದೇಶದ ಪ್ರಜಾಪ್ರಭುತ್ವಕ್ಕೆ ಭದ್ರ ಬುನಾದಿ ಹಾಕಿದವರು ಎಂದು ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ. ಗಣನಾಥ ಎಕ್ಕಾರು ಹೇಳಿದರು.

ಪಡುಬಿದ್ರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಉಡುಪಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಅಂಬೇಡ್ಕರ್ ಕುರಿತು ಓದುವಿಕೆ ನಮ್ಮ ಚಿಂತನಾ ಕ್ರಮವನ್ನು ಬದಲಾಯಿಸುವುದರ ಜತೆಗೆ ಜ್ಞಾನವನ್ನು ವೃದ್ಧಿಸುತ್ತದೆ. ಸಂವಿಧಾನದ ಮೌಲ್ಯಗಳನ್ನು ಅರಿತುಕೊಂಡು ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಕರ್ನಾಟಕ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕ ಭಾಸ್ಕರ್ ವಿಟ್ಲ ಮಾತನಾಡಿ, ಸಂವಿಧಾನದ ಮೂಲಕ ಮಹಿಳೆಯರಿಗೆ ಗೌರವ, ಸ್ವಾತಂತ್ರ್ಯ ಹಾಗೂ ಸಮಾನ ಅವಕಾಶಗಳನ್ನು ಕಲ್ಪಿಸುವಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆ ಮಹತ್ವದ್ದಾಗಿದೆ. ಇಂದಿನ ಪೀಳಿಗೆಯೂ ಮಹಿಳೆಯರಿಗೆ ಸಮಾನ ಅವಕಾಶ ಹಾಗೂ ಗೌರವ ನೀಡುವ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದರು. ಕರ್ನಾಟಕ ಪಬ್ಲಿಕ್ ಸ್ಕೂಲ್, ಪಡುಬಿದ್ರಿ ಪ್ರಾಂಶುಪಾಲೆ ಡಾ. ಸುಮಾ ಎಸ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಪ್ರಬಂಧ ಹಾಗೂ ಭಾಷಣ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯ ಹೇಮಚಂದ್ರ ಸಾಲಿಯಾನ್, ಕೆಪಿಎಸ್ ಪಡುಬಿದ್ರಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೃಷ್ಣ ಬಂಗೇರ, ಪ್ರೌಢಶಾಲಾ ವಿಭಾಗದ ಹಿರಿಯ ಸಹಶಿಕ್ಷಕಿ ಸರಿತಾ ಡಿಸೋಜಾ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶೈಲಜಾ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಶಾಲಾ ಶಿಕ್ಷಕಿ ಸುಜಾತಾ ಕಾರ್ಯಕ್ರಮ ನಿರೂಪಿಸಿದರು. ಅಜಯ್ ವಂದಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles