Thursday, October 1, 2026

spot_img

ಶಾಲಾ ಮಕ್ಕಳಿಗೆ ಸ್ವಚ್ಛತೆ, ತ್ಯಾಜ್ಯ ನಿರ್ವಹಣೆ ಕುರಿತು ಅರಿವು

ಉಡುಪಿ: ಸ್ವಚ್ಛತಾ ಹೀ ಸೇವಾ–2026 ಅಭಿಯಾನದ ಅಂಗವಾಗಿ ಸಾಲಿಗ್ರಾಮ ಪಟ್ಟಣ ಪಂಚಾಯತ್ ವತಿಯಿಂದ ಕಾರ್ಕಡ ಹೊಸ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏಕ್ ದಿನ್, ಏಕ್ ಘಂಟಾ, ಏಕ್ ಸಾಥ್ ಕಾರ್ಯಕ್ರಮ ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಸ್ವಚ್ಛತೆಯ ಮಹತ್ವ, ಘನತ್ಯಾಜ್ಯ ನಿರ್ವಹಣೆ, ಪ್ಲಾಸ್ಟಿಕ್ ತ್ಯಾಜ್ಯದ ಸಮರ್ಪಕ ವಿಲೇವಾರಿ ಹಾಗೂ ಉಡುಪಿ ಸಿವಿಕ್ ವಾಚ್‌ ಆ್ಯಪ್ ಕುರಿತು ಮಾಹಿತಿ ನೀಡಲಾಯಿತು. ತ್ಯಾಜ್ಯವನ್ನು ನಾಲ್ಕು ವಿಧಗಳಾಗಿ ವಿಂಗಡಿಸುವ ವಿಧಾನವನ್ನು ಪ್ರಾತ್ಯಕ್ಷಿಕೆಯ ಮೂಲಕ ವಿವರಿಸಿ, ಮೂಲದಲ್ಲಿಯೇ ತ್ಯಾಜ್ಯ ವಿಂಗಡಣೆ ಮಾಡುವುದರಿಂದ ಪರಿಸರ ಸಂರಕ್ಷಣೆಗೆ ಆಗುವ ಪ್ರಯೋಜನಗಳ ಬಗ್ಗೆ ಅರಿವು ಮೂಡಿಸಲಾಯಿತು.

ಘನತ್ಯಾಜ್ಯ ನಿರ್ವಹಣಾ ಘಟಕದ ಕಾರ್ಯವೈಖರಿ ಮತ್ತು ನಿರ್ವಹಣೆಯ ಕುರಿತು ಮಾದರಿಯ ಮೂಲಕ ಮಕ್ಕಳಿಗೆ ಮಾಹಿತಿ ನೀಡಲಾಯಿತು. ಸ್ವಚ್ಛತೆಯನ್ನು ದೈನಂದಿನ ಜೀವನದ ಭಾಗವಾಗಿಸಿಕೊಳ್ಳುವಂತೆ ಮಕ್ಕಳಿಗೆ ತಿಳಿಸಲಾಯಿತು.

ಕಾರ್ಯಕ್ರಮದಲ್ಲಿ 10ನೇ ವಾರ್ಡ್‌ಗೆ ಸಂಬಂಧಿಸಿದ ಸ್ವಯಂಸೇವಾ ಸಂಸ್ಥೆಯಾದ ವಿಶ್ವೇಶ್ವರ ಫ್ರೆಂಡ್ಸ್ (ರಿ.) ಕಾರ್ಕಡ ಸಂಘದ ಕಾರ್ಯದರ್ಶಿ, ಶಾಲಾ ಶಿಕ್ಷಕರು ಹಾಗೂ ಇತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles