Tuesday, October 27, 2026

spot_img

ಮಣಿಪಾಲದಲ್ಲಿ ಮಾರಕಾಸ್ತ್ರಗಳೊಂದಿಗೆ ವ್ಯಕ್ತಿ ವಶಕ್ಕೆ; ನ್ಯಾಯಾಂಗ ಬಂಧನ

ಉಡುಪಿ : ಮಣಿಪಾಲದ ವಿದ್ಯಾರತ್ನ ನಗರದ ಮಾಂಡವಿ ಎಮರಾಲ್ಡ್ ಕಟ್ಟಡದ ಹಿಂಭಾಗದ ಸಾರ್ವಜನಿಕ ರಸ್ತೆಯಲ್ಲಿ ಮಾರಕಾಸ್ತ್ರಗಳನ್ನು ಹೊಂದಿದ್ದ ಆರೋಪದ ಮೇಲೆ 26 ವರ್ಷದ ವ್ಯಕ್ತಿಯೊಬ್ಬನನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದು, ಎರಡು ಆಯುಧಗಳನ್ನು ಜಪ್ತಿ ಮಾಡಿದ್ದಾರೆ. ಬಳಿಕ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಬಂಧಿತನನ್ನು ಉಡುಪಿ ತಾಲೂಕಿನ ಕಿನ್ನಿಮೂಲ್ಕಿಯ ಮಾಂಡವಿ ಪ್ಯಾರಡೈಸ್‌ನ ನಿವಾಸಿ ಮಹಮ್ಮದ್ ಪರ್ವೇಜ್ (26) ಎಂದು ಗುರುತಿಸಲಾಗಿದೆ.

ಅಕ್ಟೋಬರ್ 24ರಂದು ಮಣಿಪಾಲ ಪೊಲೀಸ್ ಠಾಣೆಯ ತನಿಖಾ ಉಪನಿರೀಕ್ಷಕ ಶಂಭುಲಿಂಗಯ್ಯ ಎಂ.ಇ. ಅವರು ಗಸ್ತಿನಲ್ಲಿದ್ದಾಗ, ವಿದ್ಯಾರತ್ನ ನಗರದ ಮಾಂಡವಿ ಎಮರಾಲ್ಡ್ ಕಟ್ಟಡದ ಹಿಂಭಾಗದ ಸಾರ್ವಜನಿಕ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಮಾರಕಾಸ್ತ್ರಗಳೊಂದಿಗೆ ಅನುಮಾನಾಸ್ಪದವಾಗಿ ವರ್ತಿಸುತ್ತಿರುವ ಬಗ್ಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿದ ಪೊಲೀಸರು ಮಹಮ್ಮದ್ ಪರ್ವೇಜ್‌ನನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದರು.

ಈ ವೇಳೆ ಆತನಿಂದ ಸುಮಾರು 20 ಇಂಚು ಉದ್ದ ಹಾಗೂ 2 ಇಂಚು ಅಗಲದ ನೀಲಿ ಬಣ್ಣದ ಹಿಡಿಕೆಯುಳ್ಳ ಕಬ್ಬಿಣದ ಲಾಂಗ್ ಮತ್ತು ಸುಮಾರು 16 ಇಂಚು ಉದ್ದ ಹಾಗೂ 1.5 ಇಂಚು ಅಗಲದ ಹಸಿರು ಬಣ್ಣದ ಹಿಡಿಕೆಯುಳ್ಳ ಕಬ್ಬಿಣದ ಚಾಕುವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯ ವಿರುದ್ಧ ಈ ಹಿಂದೆ ಉಡುಪಿ ನಗರ, ಶಿರ್ವ, ಸೆನ್ ಹಾಗೂ ಮಂಗಳೂರು ನಗರದ ಕಾವೂರು ಪೊಲೀಸ್ ಠಾಣೆಗಳಲ್ಲಿ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದ ಪ್ರಕರಣಗಳಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ವಿಚಾರಣೆ ವೇಳೆ ದಾವೂದ್, ಇಸಾಕ್ ಹಾಗೂ ಗರುಡ ಗ್ಯಾಂಗ್‌ನ ಕೆಲವರೊಂದಿಗೆ ವೈಮನಸ್ಸಿದ್ದು, ಅವರ ಮೇಲೆ ಹಲ್ಲೆ ನಡೆಸುವ ಉದ್ದೇಶದಿಂದ ಆಯುಧಗಳನ್ನು ಇಟ್ಟುಕೊಂಡಿರುವುದಾಗಿ ಆರೋಪಿ ತಿಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಅನುಮತಿಯಿಲ್ಲದೆ ಸೂಕ್ತ ಕಾರಣವಿಲ್ಲದೆ ಮಾರಕಾಸ್ತ್ರಗಳನ್ನು ಹೊಂದಿದ್ದ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles