Saturday, October 31, 2026

spot_img

ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಿಂದ ಡಾ. ಚಂದ್ರಶೇಖರ್ ಹೆಸರು ಕೈಬಿಟ್ಟಿರುವುದು ಖಂಡನೀಯ: ಸುನಿಲ್ ಕುಮಾರ್

ಉಡುಪಿ: ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯ ಸಂದರ್ಭದಲ್ಲಿ ಉಡುಪಿಯ ಆದರ್ಶ ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಜಿ.ಎಸ್. ಚಂದ್ರಶೇಖರ್ ಅವರ ಹೆಸರನ್ನು ಮೊದಲ ಪಟ್ಟಿಯಲ್ಲಿ ಪ್ರಕಟಿಸಿ, ಬಳಿಕ ಕೈಬಿಟ್ಟು ಮತ್ತೊಬ್ಬರನ್ನು ಆಯ್ಕೆ ಮಾಡಿರುವುದು ತೀವ್ರ ಖಂಡನೀಯ ಎಂದು ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೈದ್ಯಕೀಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುವುದರ ಜತೆಗೆ ಹಲವು ಸಾಮಾಜಿಕ ಸೇವಾ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಡಾ. ಚಂದ್ರಶೇಖರ್ ಅವರು ಸದಾ ಜನರ ಧ್ವನಿಯಾಗಿ, ಸಮಾಜದ ಹಿತಕ್ಕಾಗಿ ಶ್ರಮಿಸುತ್ತ ಬಂದಿದ್ದಾರೆ. ಇಂತಹ ಸೇವಾನಿರತ ಹಾಗೂ ಗೌರವಾನ್ವಿತ ವ್ಯಕ್ತಿಯ ಸಾಧನೆ ಮತ್ತು ಕೊಡುಗೆಗಳನ್ನು ಕಡೆಗಣಿಸಿರುವುದು ನೋವಿನ ಸಂಗತಿಯಾಗಿದೆ ಎಂದು ಅವರು ಹೇಳಿದ್ದಾರೆ.

ಸಮಾಜಕ್ಕೆ ತಮ್ಮದೇ ಆದ ರೀತಿಯಲ್ಲಿ ಮಹತ್ವದ ಕೊಡುಗೆ ನೀಡಿರುವ ಡಾ. ಚಂದ್ರಶೇಖರ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡುವ ಬದಲು, ಮೊದಲ ಪಟ್ಟಿಯಲ್ಲಿ ಪ್ರಕಟಿಸಿದ್ದ ಅವರ ಹೆಸರನ್ನೇ ಕೊನೆಯ ಕ್ಷಣದಲ್ಲಿ ಕೈಬಿಟ್ಟಿರುವುದು ಅವರ ವ್ಯಕ್ತಿತ್ವ ಹಾಗೂ ಸೇವೆಗೆ ಮಾಡಿದ ಅಪಮಾನವಾಗಿದೆ. ಸರ್ಕಾರದ ಈ ನಿರ್ಧಾರದಿಂದ ವೈದ್ಯಕೀಯ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ನಿರಾಶೆಯಾಗಿದೆ. ರಾಜ್ಯ ಸರ್ಕಾರದ ಈ ನಡೆಗೆ ನನ್ನ ತೀವ್ರ ಆಕ್ರೋಶವಿದ್ದು, ಘಟನೆಯನ್ನು ಉಗ್ರವಾಗಿ ಖಂಡಿಸುತ್ತೇನೆ ಎಂದು ವಿ. ಸುನಿಲ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles