Wednesday, November 25, 2026

spot_img

ಸಾಮರಸ್ಯದ ಬದುಕು ನಿರ್ಮಾಣವೇ ನಮ್ಮ ಸರ್ಕಾರದ ಧ್ಯೇಯ: ಸಚಿವ ರಿಜ್ವಾನ್ ಅರ್ಷದ್

ಉಡುಪಿ: ಸಮಾಜದಲ್ಲಿ ಜಾತಿ, ಧರ್ಮದ ಭೇದವಿಲ್ಲದೆ ಎಲ್ಲರೂ ಸಾಮರಸ್ಯದಿಂದ ಬದುಕುವ ವಾತಾವರಣ ನಿರ್ಮಿಸುವುದು ನಮ್ಮ ಸರ್ಕಾರದ ಧ್ಯೇಯವಾಗಿದೆ. ರಾಜ್ಯದ ಗ್ರಾಮೀಣ ಪ್ರದೇಶಗಳ ಚಿತ್ರಣ ಬದಲಿಸಲು ಸರ್ಕಾರ ಬೃಹತ್ ಅಭಿವೃದ್ಧಿ ಯೋಜನೆಗಳನ್ನು ರೂಪಿಸಿದ್ದು, ಗ್ಯಾರಂಟಿ ಯೋಜನೆಗಳು ಬಡವರು ಹಾಗೂ ಸಾಮಾನ್ಯ ಜನರಿಗೆ ಆರ್ಥಿಕವಾಗಿ ನೆರವಾಗಿವೆ ಎಂದು ರಾಜ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಹೇಳಿದರು.

ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಜಿಲ್ಲಾ ಮುಖಂಡರು ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಕೇಂದ್ರದ ಆರ್ಥಿಕ ನೀತಿಗಳಿಂದ ಬೆಲೆ ಏರಿಕೆ ಹೆಚ್ಚಾಗಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರಿಗೆ ನೆರವಾಗಿವೆ. ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಪಕ್ಷದ ಕಾರ್ಯಕರ್ತರ ಜವಾಬ್ದಾರಿಯಾಗಿದೆ ಎಂದರು. ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕಿದೆ. ಕಾರ್ಯಕರ್ತರು ಇದ್ದಾಗ ಮಾತ್ರ ಮುಖಂಡರು ಬೆಳೆಯಲು ಸಾಧ್ಯ. ಪಕ್ಷಕ್ಕೆ ಸೇರ್ಪಡೆಯಾಗಲು ಇಚ್ಛಿಸುವ ಪ್ರತಿಯೊಬ್ಬರಿಗೂ ಬಾಗಿಲು ತೆರೆದಿರಬೇಕು. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಈಗಿನಿಂದಲೇ ಸಿದ್ಧತೆ ಆರಂಭಿಸಬೇಕು. ನಿರಂತರವಾಗಿ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರನ್ನು ಗುರುತಿಸಿ ಪ್ರೋತ್ಸಾಹಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಹೇಳಿದರು.

ಸರ್ಕಾರವು ಪಕ್ಷ, ಜಾತಿ ಅಥವಾ ಧರ್ಮದ ಭೇದವಿಲ್ಲದೆ ಎಲ್ಲ ಅರ್ಹ ಫಲಾನುಭವಿಗಳಿಗೂ ಗ್ಯಾರಂಟಿ ಯೋಜನೆಗಳ ಪ್ರಯೋಜನ ತಲುಪಿಸುತ್ತಿದೆ. ಪ್ರತಿಯೊಬ್ಬರೂ ಸಮಾಜದಲ್ಲಿ ನೆಮ್ಮದಿಯ ಜೀವನ ನಡೆಸುವಂತಾಗಬೇಕು ಎನ್ನುವುದೇ ಕಾಂಗ್ರೆಸ್ ಪಕ್ಷದ ಸಂಕಲ್ಪವಾಗಿದೆ ಎಂದರು. ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ಬಿಜೆಪಿ ಇದೀಗ ತಾನು ಅಧಿಕಾರದಲ್ಲಿರುವ ರಾಜ್ಯಗಳಲ್ಲಿಯೂ ಇದೇ ಮಾದರಿಯ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಇದರಿಂದ ಕರ್ನಾಟಕದ ಯೋಜನೆಗಳು ದೇಶದ ಇತರ ರಾಜ್ಯಗಳಿಗೂ ಮಾದರಿಯಾಗಿರುವುದು ಸ್ಪಷ್ಟವಾಗುತ್ತದೆ ಎಂದರು.

ಸಭೆಯಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ಶೇಖರ ಮಡಿವಾಳ ಕಾರ್ಕಳ, ದಿನಕರ್ ಹೇರೂರು, ಪ್ರಶಾಂತ್ ಜತ್ತನ್ನ, ಪ್ರಸಾದ್ ರಾಜ್ ಕಾಂಚನ್, ಉದಯಕುಮಾರ್ ಶೆಟ್ಟಿ ಮುನಿಯಾಲು, ರಮೇಶ್ ಕಾಂಚನ್, ವೈ. ಸುಕುಮಾರ್, ಗೋಪಿನಾಥ್ ಭಟ್, ಮದನ್ ಕುಮಾರ್, ಸದಾನಂದ ಶೆಟ್ಟಿ, ಪ್ರದೀಪ್ ಕುಮಾರ್, ಅರವಿಂದ್ ಪೂಜಾರಿ, ತಿಮ್ಮ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು ಸ್ವಾಗತಿಸಿದರು. ಜಿಲ್ಲಾ ವಕ್ತಾರ ಭಾಸ್ಕರ್ ರಾವ್ ಕಿದಿಯೂರು ವಂದಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles