Thursday, November 26, 2026

spot_img

ಬೆಂಗಳೂರು–ಮಡಗಾಂವ್ ವಂದೇ ಭಾರತ್ ರೈಲು ವೇಗ ಹೆಚ್ಚಿಸಲು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ

ಉಡುಪಿ: ಹೊಸದಾಗಿ ಆರಂಭಗೊಂಡಿರುವ ಬೆಂಗಳೂರು–ಮಂಗಳೂರು–ಕಾರವಾರ–ಮಡಗಾಂವ್ ವಂದೇ ಭಾರತ್ ರೈಲಿನ ವೇಗವನ್ನು ಹೆಚ್ಚಿಸಿ, ಪ್ರಯಾಣದ ಸಮಯವನ್ನು ಕಡಿಮೆ ಮಾಡುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ರೈಲ್ವೆ ಮಂಡಳಿಯ ಕಾರ್ಯಾಚರಣೆ ಮತ್ತು ವ್ಯವಹಾರ ಅಭಿವೃದ್ಧಿ ವಿಭಾಗದ ಸದಸ್ಯರಿಗೆ ಮನವಿ ಸಲ್ಲಿಸಿದ್ದಾರೆ.

ಪ್ರಸ್ತುತ ವಂದೇ ಭಾರತ್ ರೈಲು ಬೆಂಗಳೂರು–ಮಡಗಾಂವ್ ನಡುವಿನ ಪ್ರಯಾಣಕ್ಕೆ ಸುಮಾರು 13 ಗಂಟೆಗಳನ್ನು ತೆಗೆದುಕೊಳ್ಳುತ್ತಿದೆ. ಘಾಟಿ ಪ್ರದೇಶದಲ್ಲಿ ಉಂಟಾಗುವ ವಿಳಂಬವನ್ನು ತಪ್ಪಿಸಿ, ರೈಲಿನ ವೇಗವನ್ನು ಹೆಚ್ಚಿಸಿದರೆ ಪ್ರಯಾಣಿಕರಿಗೆ ಸುಮಾರು ಎರಡು ಗಂಟೆಗಳ ಸಮಯ ಉಳಿತಾಯವಾಗಲಿದೆ. ಇದರಿಂದ ಬೆಂಗಳೂರು–ಮಡಗಾಂವ್ ನಡುವಿನ ಪ್ರಯಾಣವನ್ನು 11 ಗಂಟೆಗಳಲ್ಲಿ ಪೂರ್ಣಗೊಳಿಸಲು ಸಾಧ್ಯವಿದೆ ಎಂದು ಸಂಸದರು ಮನವಿಯಲ್ಲಿ ತಿಳಿಸಿದ್ದಾರೆ.

ಹೊಸ ವಂದೇ ಭಾರತ್ ರೈಲು ಮಧ್ಯಮ ವರ್ಗದ ಪ್ರಯಾಣಿಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸುತ್ತಿದ್ದು, ದಿನದಿಂದ ದಿನಕ್ಕೆ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿದೆ. ಪ್ರಯಾಣದ ಅವಧಿ ಕಡಿಮೆಯಾದರೆ ರೈಲು ಇನ್ನಷ್ಟು ಜನಪ್ರಿಯವಾಗುವುದರ ಜತೆಗೆ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಆದ್ದರಿಂದ ರೈಲಿನ ವೇಗವನ್ನು ಹೆಚ್ಚಿಸಿ, ಪ್ರಯಾಣದ ಸಮಯವನ್ನು ಕಡಿಮೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles