ಉಡುಪಿ: ಬನ್ನಂಜೆಯ ಕಾಮತ್ ಬಿಲ್ಡಿಂಗ್ ಎದುರಿನ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ಪಲ್ಸರ್ ಬೈಕ್ ಕಳವಾಗಿರುವ ಘಟನೆ ನಡೆದಿದೆ. ಬನ್ನಂಜೆಯ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಕಾಮತ್ ಬಿಲ್ಡಿಂಗ್‌ನಲ್ಲಿ ವಾಸವಾಗಿರುವ ಡುಂಗೂರು ರಾಮ್ (45) ಅವರು KA-20-EW-1615 ನೋಂದಣಿ ಸಂಖ್ಯೆಯ ಪಲ್ಸರ್ ಬೈಕ್ ಹೊಂದಿದ್ದರು. ನ.23ರಂದು ರಾತ್ರಿ 9.30ರ ಸುಮಾರಿಗೆ ಬ್ರಹ್ಮಗಿರಿಯಲ್ಲಿ ಕೆಲಸ ಮುಗಿಸಿ ಮನೆಗೆ ಬಂದ ಅವರು, ಬೈಕ್‌ನ್ನು ಕಟ್ಟಡದ ಎದುರಿನ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದರು.

ನ.24ರಂದು ಬೆಳಿಗ್ಗೆ 7 ಗಂಟೆಗೆ ಬಂದು ನೋಡಿದಾಗ ಬೈಕ್ ನಾಪತ್ತೆಯಾಗಿತ್ತು. ಸುತ್ತಮುತ್ತ ಹುಡುಕಾಡಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ, ನ.23ರ ರಾತ್ರಿ 9.30ರಿಂದ ನ.24ರ ಬೆಳಿಗ್ಗೆ 7 ಗಂಟೆಯ ನಡುವಿನ ಅವಧಿಯಲ್ಲಿ ಯಾರೋ ಕಳ್ಳರು ಬೈಕ್ ಕಳವು ಮಾಡಿಕೊಂಡು ಹೋಗಿರುವುದಾಗಿ ಉಡುಪಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಳವಾದ ಬೈಕ್‌ನ ಅಂದಾಜು ಮೌಲ್ಯ 50 ಸಾವಿರ ರೂ. ಎಂದು ತಿಳಿಸಲಾಗಿದೆ. ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


