Wednesday, October 22, 2025

spot_img

ಹೊಸ ವರ್ಷಾಚರಣೆಯಿಂದ ಅಬಕಾರಿ ಇಲಾಖೆಗೆ ಭರ್ಜರಿ ಆದಾಯ

ಬೆಂಗಳೂರು

    ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಗೆ ನೂರಾರು ಕೋಟಿ ರುಪಾಯಿ ಆದಾಯ ಹರಿದು ಬಂದಿದೆ. ಡಿಸೆಂಬರ್ 31 ರ ಮಂಗಳವಾರ ಬೆಳಿಗ್ಗೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅರ್ಧ ದಿನದ ಅವಧಿಯಲ್ಲಿ ಕೆಎಸ್​ಬಿಸಿಎಲ್​ನಿಂದ ಬರೋಬ್ಬರಿ 308 ಕೋಟಿ ರುಪಾಯಿ ಮದ್ಯ ಮಾರಾಟವಾಗಿದೆ. ಅಬಕಾರಿ ಇಲಾಖೆಯ ನಿರೀಕ್ಷೆಗೂ ಮೀರಿ ಮಾರಾಟವಾಗಿದೆ.

  ಐಎಂಎಲ್ 4,83,715 ಲಕ್ಷ ಬಾಕ್ಸ್ ಮಾರಾಟದಿಂದ 250.25 ಕೋಟಿ ಆದಾಯ ಸಂಗ್ರಹವಾಗಿದೆ. ಬಿಯರ್- 2,92,339 ಲಕ್ಷ ಬಾಕ್ಸ್ ಮಾರಾಟದಿಂದ 57,75 ಕೋಟಿ ಆದಾಯ ಸಂಗ್ರಹವಾಗಿದೆ. ಒಟ್ಟು 7,76,042 ಲಕ್ಷ ಬಾಕ್ಸ್ ಮದ್ಯ ಮಾರಾಟದಿಂದ ಒಟ್ಟು 308 ಕೋಟಿ ರುಪಾಯಿ ‌ಆದಾಯ ಸಂಗ್ರಹವಾಗಿದೆ.

   27-12-2024 ರ ಶುಕ್ರವಾರದಂದು ಕೂಡ ಬರೋಬ್ಬರಿ 408.58 ಕೋಟಿ ರುಪಾಯಿ ಮದ್ಯ ಮಾರಾಟವಾಗಿತ್ತು. ಐಎಂಎಲ್ 6,22,062 ಲಕ್ಷ ಬಾಕ್ಸ್ ಮಾರಾಟದಿಂದ 327,50 ಕೋಟಿ ರುಪಾಯಿ ಆದಾಯ ಸಂಗ್ರಹವಾಗಿತ್ತು. ಬಿಯರ್ 4,04,998 ಲಕ್ಷ ಬಾಕ್ಸ್ ಮಾರಾಟದಿಂದ 80,58 ಕೋಟಿ ರುಪಾಯಿ ಆದಾಯ ಗಳಿಕೆಯಾಗಿತ್ತು. ಐಎಂಎಲ್, ಬಿಯರ್ ಸೇರಿ ಒಟ್ಟು- 10,27,060 ಲಕ್ಷ ಬಾಕ್ಸ್ ಮದ್ಯ ಮಾರಾಟದಿಂದ 408.50 ಕೋಟಿ ರುಪಾಯಿ ಆದಾಯ ಹರಿದುಬಂದಿತ್ತು.

   ಏತನ್ಮಧ್ಯೆ, ಬೆಂಗಳೂರಿನಲ್ಲಿ ಹೊಸ ವರ್ಷ ಆಚರಣೆ ಸಂಭ್ರಮದಿಂದ ನಡೆದಿದೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಸೇರಿದಂತೆ ನಗರದ ವಿವಿಧ ಕಡೆಗಳಲ್ಲಿ ಲಕ್ಷಾಂತರ ಮಂದಿ ಸಂಭ್ರಮದಿಂದ ಕುಣಿದು ಕುಪ್ಪಳಿಸಿದ್ದಾರೆ. ಕೆಲವೆಡೆ ಸಣ್ಣಪುಟ್ಟ ಅಹಿತಕರ ಘಟನೆಗಳು ನಡೆದಿದ್ದು ಬಿಟ್ಟರೆ, ಒಟ್ಟಾರೆಯಾಗಿ ಹೊಸ ವರ್ಷದ ಸ್ವಾಗತ, ಸಂಭ್ರಮಾಚರಣೆ ಶಾಂತಿಯುತವಾಗಿ ನೆರವೇರಿದೆ.

Related Articles

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles