Wednesday, October 22, 2025

spot_img

ಕೇಜ್ರಿವಾಲ್ ಗೆ ಬಿಜೆಪಿ ತಿರುಗೇಟು…..!

ನವದೆಹಲಿ: 

    ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದು, ಆರ್‌ಎಸ್‌ಎಸ್ ಸೇರಿದಂತೆ ಭಾರತೀಯ ಜನತಾ ಪಕ್ಷದ(ಬಿಜೆಪಿ) ಕಾರ್ಯಗಳಿಗೆ ಸಂಬಂಧಿಸಿದಂತೆ ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಅಲ್ಲದೆ ಬಿಜೆಪಿ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ.

    ಪತ್ರದಲ್ಲಿ, ಕೇಜ್ರಿವಾಲ್ ಅವರು ಬಿಜೆಪಿಯ ನಡವಳಿಕೆ ಮತ್ತು ಪ್ರಜಾಪ್ರಭುತ್ವದ ಮೇಲೆ ಅದರ ಪ್ರಭಾವಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ಆರ್ ಎಸ್ಎಸ್ ನಿಂದ ಸ್ಪಷ್ಟೀಕರಣ ಕೋರಿದ್ದಾರೆ.

   ಈ ಹಿಂದೆ ಬಿಜೆಪಿ ಮಾಡಿದ ತಪ್ಪುಗಳನ್ನು ಆರ್‌ಎಸ್‌ಎಸ್ ಬೆಂಬಲಿಸುತ್ತದೆಯೇ? ಚುನಾವಣೆ ಗೆಲ್ಲಲು ಬಿಜೆಪಿ ಅಡ್ಡದಾರಿ ಹಿಡಿಯುತ್ತಿದ್ದು, ಇದನ್ನು ನೀವು ಬೆಂಬಲಿಸುತ್ತೀರಾ? ಎಂದು ಕೇಜ್ರಿವಾಲ್ ಮೋಹನ್ ಭಾಗವತ್ ಅವರನ್ನು ಪ್ರಶ್ನಿಸಿದ್ದಾರೆ. ಈ ಪತ್ರಕ್ಕೆ ಬಿಜೆಪಿಯ ವೀರೇಂದ್ರ ಸಚ್‌ದೇವ ಅವರು ತೀಕ್ಷ್ಣವಾಗಿಯೇ ಪ್ರತಿಕ್ರಿಯಿಸಿದ್ದು, ಕೇಜ್ರಿವಾಲ್‌ಗೆ ಮೋಹನ್ ಭಾಗವತ್ ಅವರೊಂದಿಗೆ ಮಾತನಾಡಲು ಯಾವುದೇ ಸ್ಥಾನಮಾನ ಅಥವಾ ಹುದ್ದೆಯಲ್ಲಿ ಇಲ್ಲ ಎಂದು ಹೇಳಿದ್ದಾರೆ.

  “ಆರ್ ಎಸ್ಎಸ್ ಮುಖ್ಯಸ್ಥರೊಂದಿಗೆ ಮಾತನಾಡಲು ನಿಮಗೆ ಯಾವುದೇ ಸ್ಥಾನಮಾನ ಇಲ್ಲ. ಅವರ ಹೆಸರನ್ನು ತೆಗೆದುಕೊಳ್ಳುವುದನ್ನು ಬಿಟ್ಟುಬಿಡಿ. ವಿಷಯಾಂತರ ಮಾಡಬೇಡಿ. ನೀವು ಲೂಟಿ ಮಾಡಲು ಹೇಗೆ ಕೆಲಸ ಮಾಡಿದ್ದೀರಿ ಎಂದು ಜನತೆಗೆ ಹೇಳಿ ಮತ್ತು ಅದಕ್ಕಾಗಿ ದೆಹಲಿ ಜನರಲ್ಲಿ ಕ್ಷಮೆಯಾಚಿಸಿ ಎಂದು ದೆಹಲಿ ಬಿಜೆಪಿ ಮುಖ್ಯಸ್ಥ ಸಚ್‌ದೇವ ಅವರು ಎಎನ್‌ಐಗೆ ತಿಳಿಸಿದ್ದಾರೆ.ಎಎಪಿ ಸಂಚಾಲಕ ಕೇಜ್ರಿವಾಲ್ ಅವರು ಕೆನಡಾದಲ್ಲಿ “ಭಯೋತ್ಪಾದಕರಿಂದ” ಹಣ ಪಡೆದಿದ್ದಾರೆ ಎಂದು ದೆಹಲಿ ಬಿಜೆಪಿ ಅಧ್ಯಕ್ಷರು ಆರೋಪಿಸಿದ್ದಾರೆ.

Related Articles

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles