Friday, June 27, 2025

spot_img

ಹಿರಿಯ ಸಾಹಿತಿ ನಾ .ಡಿಸೋಜಾ ವಿಧಿವಶ……!

ಶಿವಮೊಗ್ಗ:

    ಹಿರಿಯ ಸಾಹಿತಿ ನಾ.ಡಿಸೋಜ (87) ಅವರು ಅನಾರೋಗ್ಯದಿಂದ ಮಂಗಳೂರಿನ ಫಾದರ್‌ ಮುಲ್ಲರ್‌ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾದರು. ಪರಿಸರ ಕಾಳಜಿಯುಳ್ಳ ಮಹತ್ವದ ಕಥೆಗಾರರೆನಿಸಿರುವ ಇವರು ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯವನ್ನು ಒಳಗೊಂಡಂತೆ ಅಪಾರವಾದ ಕೃಷಿ ನಡೆಸಿದ್ದಾರೆ.

    ನಾ.ಡಿಸೋಜ ಅವರ ನಿಧನದ ಬಗ್ಗೆ ಪುತ್ರ ನವೀನ್‌ ಡಿಸೋಜ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ತಂದೆಯ ನಿಧನದ ಸುದ್ದಿಯನ್ನು ಪ್ರಕಟಿಸಿದ್ದಾರೆ. ನಮ್ಮ ಪೂಜ್ಯ ತಂದೆ ಖ್ಯಾತ ಸಾಹಿತಿ, ಡಾ. ನಾ. ಡಿಸೋಜ ಅವರು ಭಾನುವಾರ ಸಂಜೆ 7.50 ಕ್ಕೆ ಅನಾರೋಗ್ಯದ ಕಾರಣ ಮಂಗಳೂರಿನ ಫಾದರ್‌ ಮುಲ್ಲರ್‌ ಆಸ್ಪತ್ರೆಯಲ್ಲಿ ದೈವಾಧೀನರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ನಾಳೆ ಮಧ್ಯಾಹ್ನದ ನಂತರ ಸಾಗರದ ಅವರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.ನಾ. ಡಿಸೋಜ ಅವರು ಬರಹಗಾರರು, ಲೋಕೋಪಯೋಗಿ ಇಲಾಖೆಯಲ್ಲಿ ನೌಕರರಾಗಿ ನಿವೃತ್ತಿ ಹೊಂದಿದವರು.

ಸುಮಾರು ಐದು ದಶಕಗಳಿಂದಲೂ ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿಯೂ ಕೃತಿ ರಚಿಸುತ್ತ ಬಂದಿರುವ ನಾರ್ಬಟ್ ಡಿಸೋಜ ಅವರು 1937ರ ಜೂನ್ 6ರಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಜನಿಸಿದರು. ತಂದೆ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಎಫ್.ಪಿ. ಡಿಸೋಜ, ತಾಯಿ ರೂಪೀನಾ ಡಿಸೋಜ.

ಪರಿಸರ ಕಾಳಜಿಯುಳ್ಳ ಮಹತ್ವದ ಕಥೆಗಾರರೆನಿಸಿದ್ದು ಕನ್ನಡ ಸಾಹಿತ್ಯ ಲೋಕದಲ್ಲಿ ಮ

 

Related Articles

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles