Tuesday, July 14, 2026

spot_img

ಅಂಜಾರುದಲ್ಲಿ ಕೋಳಿ ಅಂಕ ಜೂಜಾಟದ ಮೇಲೆ ಪೊಲೀಸರ ದಾಳಿ: 8 ಮಂದಿ ಬಂಧನ

ಉಡುಪಿ : ಬ್ರಹ್ಮಾವರ ವೃತ್ತದ ವ್ಯಾಪ್ತಿಯ ಅಂಜಾರು ಗ್ರಾಮದ ಮೂಡು ಅಂಜಾರು ಕಲ್ಕುಡ ದೇವಸ್ಥಾನದ ಸಮೀಪ ಸಾರ್ವಜನಿಕ ಸ್ಥಳದಲ್ಲಿ ನಡೆಯುತ್ತಿದ್ದ ಅಕ್ರಮ ಕೋಳಿ ಅಂಕ ಜೂಜಾಟದ ಮೇಲೆ ಹಿರಿಯಡಕ ಪೊಲೀಸರು ದಾಳಿ ನಡೆಸಿ ಎಂಟು ಮಂದಿಯನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 36,270 ನಗದು, ಎಂಟು ದ್ವಿಚಕ್ರ ವಾಹನಗಳು ಹಾಗೂ ಒಂದು ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ಜುಲೈ 13ರಂದು ಸಂಜೆ ಸುಮಾರು 4 ಗಂಟೆಗೆ ಇಲಾಖೆಯ ಜೀಪಿನಲ್ಲಿ ರೌಂಡ್ಸ್ ಕರ್ತವ್ಯದಲ್ಲಿದ್ದ ಪೊಲೀಸರಿಗೆ ಕೋಳಿ ಅಂಕ ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅಂಜಾರು ಗ್ರಾಮದ ಮೂಡು ಅಂಜಾರು ಕಲ್ಕುಡ ದೇವಸ್ಥಾನದ ಬಳಿ ತಲುಪಿದ ಪೊಲೀಸ್ ತಂಡ ಮರೆಯಲ್ಲಿ ನಿಂತು ಪರಿಶೀಲನೆ ನಡೆಸಿದೆ. ಈ ವೇಳೆ ಸುಮಾರು 10ರಿಂದ 15 ಮಂದಿ ಸಾರ್ವಜನಿಕ ಸ್ಥಳದಲ್ಲಿ ಕೋಳಿಗಳ ಕಾಲಿಗೆ ಹರಿತವಾದ ಬಾಳುಗಳನ್ನು ಕಟ್ಟಿ ಕಾಳಗಕ್ಕೆ ಬಿಟ್ಟು, ಅವುಗಳಿಗೆ ಹಿಂಸೆ ನೀಡುತ್ತಾ ಕೋಳಿಗಳ ಮೇಲೆ ಹಣವನ್ನು ಪಣವಾಗಿಟ್ಟು ಜೂಜಾಟ ನಡೆಸುತ್ತಿರುವುದು ದೃಢಪಟ್ಟಿತು. ತಕ್ಷಣ ಸಂಜೆ 5.10ಕ್ಕೆ ಪೊಲೀಸ್ ಸಿಬ್ಬಂದಿ ದಾಳಿ ನಡೆಸಿದಾಗ, ಕೆಲವರು ಕಾಳಗಕ್ಕೆ ಕಟ್ಟಿದ್ದ ಕೋಳಿಗಳೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾರೆ. ದಾಳಿಯ ವೇಳೆ ಸ್ಥಳದಲ್ಲಿದ್ದ ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ ಪೊಲೀಸರು, ಅವರಿಂದ 36,270 ನಗದು, ಎಂಟು ಮೋಟಾರ್ ಸೈಕಲ್‌ಗಳು ಹಾಗೂ ಒಂದು ಕಾರನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles