Thursday, August 13, 2026

spot_img

ಅಧಿಕ ಬಡ್ಡಿ ಸಾಲ ನೀಡಿ ಕಿರುಕುಳ: ಮೂವರು ಆರೋಪಿಗಳ ಬಂಧನ

ಉಡುಪಿ : ಅಧಿಕ ಬಡ್ಡಿ ದರದಲ್ಲಿ ಸಾಲ ನೀಡಿ, ಕಂತಿನ ಹಣ ಬಾಕಿ ಉಳಿದಾಗ ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳೂರಿನ ಸಾನಿಧ್ಯ ಫೈನಾನ್ಸ್‌ನವರು ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜಾಲ್ ಪರಿಸರದಲ್ಲಿ ಅಧಿಕ ಬಡ್ಡಿ ದರದಲ್ಲಿ ಸಾಲ ನೀಡುತ್ತಿದ್ದರು. ಸಾಲದ ಕಂತಿನ ಹಣ ಬಾಕಿ ಉಳಿದ ಸಂದರ್ಭದಲ್ಲಿ ಸಾರ್ವಜನಿಕರನ್ನು ಪೀಡಿಸುತ್ತಿದ್ದರು ಎನ್ನಲಾಗಿದೆ.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕುಂಜಾಲ್ ನಿವಾಸಿ ಗಣೇಶ್ ಗಾಣಿಗ ಅವರಿಗೆ ಸೇರಿದ ಮೋಟಾರು ಸೈಕಲನ್ನು ಬಲವಂತವಾಗಿ ಕೊಂಡೊಯ್ದು, ಜಾಮೀನುದಾರ ರಾಜೇಶ್ ನಾಯ್ಕ ಅವರಿಗೆ ಹಲ್ಲೆ ನಡೆಸಿದ ಆರೋಪವೂ ಕೇಳಿಬಂದಿದೆ. ಈ ಕುರಿತು ರಾಜೇಶ್ ನಾಯ್ಕ ನೀಡಿದ ದೂರಿನ ಮೇರೆಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳಾದ ಮಂಗಳೂರಿನ ಕುಲಾಯಿ ನಿವಾಸಿ ಸಂದೀಪ್ ಶೆಟ್ಟಿ ಹಾಗೂ ಕಾವೂರು ನಿವಾಸಿ ವಿಜೀತ್ ಶೆಟ್ಟಿ ಅವರನ್ನು ಆ.6ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಇದೀಗ ಪ್ರಕರಣದ ಮತ್ತೊಬ್ಬ ಆರೋಪಿ ಮಂಗಳೂರಿನ ಬಜ್ಪೆ–ಮಳವೂರು ನಿವಾಸಿ ಸಂಪತ್ ಅವರನ್ನು ಆ.13ರಂದು ಬಂಧಿಸಲಾಗಿದೆ. ಆರೋಪಿಗಳು ಬಲವಂತವಾಗಿ ಕೊಂಡೊಯ್ದಿದ್ದ ಮೋಟಾರು ಸೈಕಲ್ ಹಾಗೂ ಕೃತ್ಯಕ್ಕೆ ಬಳಸಲಾಗಿದೆ ಎನ್ನಲಾದ ಕಾರನ್ನು ಪೊಲೀಸರು ತನಿಖಾ ಸಮಯದಲ್ಲಿ ವಶಕ್ಕೆ ಪಡೆದಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles