Sunday, May 24, 2026

spot_img

ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು?

ಉಡುಪಿ : ಕೊಲ್ಲೂರು ಸಮೀಪ ದಳಿಯಲ್ಲಿ ಸಂಭವಿಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಮೈಮೇಲಿದ್ದ ಚಿನ್ನಾಭರಣಗಳು ನಾಪತ್ತೆಯಾಗಿರುವ ಘಟನೆ ಇದೀಗ ಬೆಳಕಿಗೆ ಬಂದಿದ್ದು, ಮೃತರನ್ನೂ ಬಿಡದ ಕಳ್ಳರ ಅಮಾನವೀಯ ಕೃತ್ಯ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಮೇ 17ರಂದು ಕೇರಳ ಮೂಲದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ಜೀಪಿಗೆ ಮೀನು ಸಾಗಾಟದ ಇನ್ಸುಲೇಟರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಎಂಟು ಮಂದಿ ಗಾಯಗೊಂಡಿದ್ದರು.

ಅಪಘಾತದಲ್ಲಿ ಕೇರಳ ಮೂಲದ ಜ್ಯೋತಿ ಹಾಗೂ ಅರಿಯಾ ಅನೂಫ್ ಮೃತಪಟ್ಟಿದ್ದರು. ಇದೀಗ ಮೃತಪಟ್ಟ ಜ್ಯೋತಿ ಅವರ ಮೈಮೇಲಿದ್ದ ಸುಮಾರು 18 ಗ್ರಾಂ ತೂಕದ ಚಿನ್ನಾಭರಣಗಳು ಕಾಣೆಯಾಗಿರುವ ಬಗ್ಗೆ ಕುಟುಂಬಸ್ಥರು ಕೊಲ್ಲೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಅಪಘಾತ ಸಂಭವಿಸಿದ ಸ್ಥಳದಲ್ಲೇ ಮೃತಳ ಮೈಮೇಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಘಟನೆಯ ಒಂದು ವಾರದ ಬಳಿಕ ಕುಟುಂಬಸ್ಥರು ದೂರು ದಾಖಲಿಸಿದ್ದು, ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.

ದುರಂತದಲ್ಲಿ ಕುಟುಂಬ ಸದಸ್ಯರನ್ನು ಕಳೆದುಕೊಂಡ ನೋವಿನ ನಡುವೆಯೇ ಇಂತಹ ಅಮಾನವೀಯ ಕೃತ್ಯ ನಡೆದಿರುವುದು ಸ್ಥಳೀಯರಲ್ಲಿ ತೀವ್ರ ಬೇಸರ ಮೂಡಿಸಿದೆ. ಅಪಘಾತದಲ್ಲಿ ಮೃತಪಟ್ಟವರನ್ನೂ ಬಿಡದ ಮಟ್ಟಿಗೆ ಮಾನವೀಯತೆ ಕುಸಿದಿದೆಯೇ? ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಪಘಾತ ಸ್ಥಳದಲ್ಲಿದ್ದವರ ಮಾಹಿತಿ ಹಾಗೂ ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ತನಿಖೆ ಮುಂದುವರಿದಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles