Friday, March 6, 2026

spot_img

ಅಸಹಾಯಕ ಅಪ್ರಾಪ್ತ ಬಾಲಕಿಯ ರಕ್ಷಣೆ…

ಉಡುಪಿ : ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದಲ್ಲಿ ಅಸಹಾಯಕ ಸ್ಥಿತಿಯಲ್ಲಿ ಅಲೆದಾಡುತ್ತಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ರಕ್ಷಿಸಲಾಗಿದೆ.

ದೇವಸ್ಥಾನಕ್ಕೆ ದರ್ಶನಾರ್ಥಿಯಾಗಿ ತೆರಳಿದ್ದ ಆದಿ ಉಡುಪಿಯ ಪ್ರೇಮ ರಾಮಚಂದ್ರ ಅವರಿಗೆ ಬಾಲಕಿ ಕಂಡುಬಂದಿದ್ದು, ಆಕೆಯ ವರ್ತನೆ ಸಂಶಯಾಸ್ಪದವಾಗಿ ಕಂಡ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ್ದಾರೆ. ಬಾಲಕಿ ಮನನೊಂದು ಮನೆ ಬಿಟ್ಟು ಬಂದಿರುವುದಾಗಿ ತಿಳಿದುಬಂದ ನಂತರ ಸಮಾಜಸೇವಕ ನಿತ್ಯಾನಂದ ಒಳಕಾಡುವರಿಗೆ ಮಾಹಿತಿ ನೀಡಲಾಗಿದೆ.

 ಅವರ ಸೂಚನೆಯಂತೆ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದ್ದು, ಬಾಲಕಿಗೆ ದೊಡ್ಡಣಗುಡ್ಡೆಯ ಬಾಲಕೀಯರ ಬಾಲ ಮಂದಿರದಲ್ಲಿ ತಾತ್ಕಾಲಿಕ ಆಶ್ರಯ ಕಲ್ಪಿಸಲಾಗಿದೆ. ಈ ಕಾರ್ಯದಲ್ಲಿ ಹರೀಶ್ ಪೂಜಾರಿ ಉದ್ಯಾವರ ಸಹಕರಿಸಿದರು. ಬಾಲಕಿ ನಾಪತ್ತೆಯಾದ ಬಗ್ಗೆ ಈಗಾಗಲೇ ಹಳೇಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮಾಹಿತಿ ಪಡೆದ ಹಳೇಬೀಡು ಪೊಲೀಸರು ಬಾಲಕಿಯ ತಾಯಿಯೊಂದಿಗೆ ಉಡುಪಿಗೆ ಆಗಮಿಸಿದ್ದು, ಮಕ್ಕಳ ಕಲ್ಯಾಣ ಸಮಿತಿಯ ಮೂಲಕ ಬಾಲಕಿಯನ್ನು ಅವರಿಗೆ ಒಪ್ಪಿಸಲಾಗಿದೆ. ತಾಯಿಯೊಂದಿಗೆ ತೆರಳಲು ಬಾಲಕಿ ನಿರಾಕರಿಸಿದ ಕಾರಣ, ಚಿಕ್ಕಮಗಳೂರು ಬಾಲಕೀಯರ ಬಾಲ ಮಂದಿರದಲ್ಲಿ ಪುನರ್ವಸತಿ ಕಲ್ಪಿಸುವ ಪ್ರಕ್ರಿಯೆ ಮುಂದುವರಿದಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles