Thursday, March 5, 2026

spot_img

ಉಡುಪಿ ಜಿಲ್ಲೆ ಸಂಪ್ರದಾಯಬದ್ಧ ಕಂಬಳ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಉಡುಪಿ : ಸಂಪ್ರದಾಯಬದ್ಧ ಕಂಬಳ ಸಮಿತಿ ಉಡುಪಿ ಜಿಲ್ಲೆಯ ಪರವಾಗಿ ಮಾನ್ಯ ಉಡುಪಿ ಜಿಲ್ಲಾಧಿಕಾರಿಗಳಿಗೆ ಜಿಲ್ಲೆಯ ಸಂಪ್ರದಾಯಬದ್ಧ ಕಂಬಳಗಳ ವಿವರ ಹಾಗೂ ಸರ್ಕಾರದಿಂದ ಅನುದಾನ ಒದಗಿಸುವ ಬಗ್ಗೆ ಮನವಿ ಸಲ್ಲಿಸಲಾಯಿತು. 

ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಮುಂದಿನ ದಿನಗಳಲ್ಲಿ ಅನುದಾನದ ಬಗ್ಗೆ ಸರ್ಕಾರದೊಂದಿಗೆ ಸಮಾಲೋಚಿಸಿ ವ್ಯವಸ್ಥೆಗೊಳಿಸುವ ಬಗ್ಗೆ ಹಾಗೂ ಈ ಬಾರಿಯ ಸಂಪ್ರದಾಯಬದ್ಧ ಕಂಬಳ ವೀಕ್ಷಣೆಗೂ ಬರುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಸುಧಾಕರ್ ಹೆಗ್ಡೆ ಹೆರಂಜೆ ದೊಡ್ಡಮನೆ ಹಾಗೂ ಸಮಿತಿಯ ಕಾನೂನು ಸಲಹೆಗಾರರಾದ ಚೇರ್ಕಾಡಿ ದೊಡ್ಡಮನೆ ಪ್ರೇಮ್ ಪ್ರಸಾದ್ ಶೆಟ್ಟಿಯವರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles