Saturday, March 14, 2026

spot_img

ಉಡುಪಿ ಜಿಲ್ಲೆಯ ಮೂವರಿಗೆ ಗಡಿಪಾರು ಆದೇಶ…

ಉಡುಪಿ: ಜಿಲ್ಲೆಯ ಮೂರು ಮಂದಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ. ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಸಂದೇಶ್ ಮತ್ತು ಸುಶಾಂತ್ ಹಾಗೂ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಜಬ್ಬಾರ್ ಹುಸೇನ್ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಮಾರ್ಚ್ 12 ರಂದು ಗಡಿಪಾರು ಆದೇಶ ಹೊರಡಿಸಿದ್ದಾರೆ.

ಪಡುಬಿದ್ರಿ ಠಾಣಾ ವ್ಯಾಪ್ತಿಯ ಜಬ್ಬಾರ್ ಹುಸೇನ್ ನಡ್ಸಾಲು ಗ್ರಾಮ, ಕಾಪು ತಾಲೂಕು ನಿವಾಸಿಯಾಗಿದ್ದು, ಈತನ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟ್ ತೆರೆಯಲಾಗಿದೆ. ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳು ಹಾಗೂ ಮಂಗಳೂರು ನಗರದಲ್ಲಿ ಒಟ್ಟು 16 ಪ್ರಕರಣಗಳು ದಾಖಲಾಗಿವೆ. ಹಿರಿಯಡ್ಕ ಠಾಣಾ ವ್ಯಾಪ್ತಿಯ ಸಂದೇಶ್  , ದೇವಿ ನಿಲಯ, ಪುತ್ತಿಗೆ ಮುಖ್ಯ ರಸ್ತೆ, ಬೊಮ್ಮರಬೆಟ್ಟು ಗ್ರಾಮ, ಉಡುಪಿ ತಾಲೂಕು ನಿವಾಸಿಯಾಗಿದ್ದು, ಈತನ ವಿರುದ್ಧ ಐದು ಪ್ರಕರಣಗಳು ದಾಖಲಾಗಿದ್ದು ರೌಡಿ ಶೀಟ್ ತೆರೆಯಲಾಗಿದೆ. ಜೊತೆಗೆ ಹಿರಿಯಡ್ಕ ಠಾಣಾ ವ್ಯಾಪ್ತಿಯ ಸುಶಾಂತ್, ಸೀತಾ ನಿಲಯ, ಪಾಪುಜೆ ದರ್ಖಾಸು, ಹಿರಿಯಡ್ಕ ನಿವಾಸಿಯಾಗಿದ್ದು, ಈತನ ವಿರುದ್ಧ ಮೂರು ಪ್ರಕರಣಗಳು ದಾಖಲಾಗಿವೆ.

ಗಡಿಪಾರು ಆದೇಶದಂತೆ ಜಬ್ಬಾರ್ ಹುಸೇನ್ ಅವರನ್ನು ಹಾಸನ ಜಿಲ್ಲೆಯ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗೆ, ಸಂದೇಶ್ ಅವರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗೆ ಹಾಗೂ ಸುಶಾಂತ್ ಅವರನ್ನು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles