Tuesday, June 30, 2026

spot_img

ಉಡುಪಿ ಜಿಲ್ಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆಗೆ ಚಾಲನೆ; ಮನೆ ಮನೆಗೆ ಎನ್ಯೂಮರೇಷನ್ ಫಾರ್ಮ್ ವಿತರಣೆ ಆರಂಭ

ಉಡುಪಿ: ರಾಜ್ಯಾದ್ಯಂತ ಇಂದಿನಿಂದ ಆರಂಭಗೊಂಡಿರುವ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಗೆ ಉಡುಪಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅಧಿಕೃತ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಪರ್ಯಾಯ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಎನ್ಯೂಮರೇಷನ್ ಫಾರ್ಮ್ ವಿತರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.

 ಬಳಿಕ ಬೂತ್ ಮಟ್ಟದ ಅಧಿಕಾರಿಗಳೊಂದಿಗೆ (ಬಿಎಲ್‌ಒ) ಸೇರಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಅಭಿಯಾನದ ಅಂಗವಾಗಿ ಜಿಲ್ಲೆಯಾದ್ಯಂತ ಬಿಎಲ್‌ಒಗಳು ಮನೆ ಮನೆಗೆ ತೆರಳಿ ಮತದಾರರಿಗೆ ಎನ್ಯೂಮರೇಷನ್ ಫಾರ್ಮ್‌ಗಳನ್ನು ವಿತರಿಸುವ ಕಾರ್ಯವನ್ನು ಆರಂಭಿಸಿದ್ದಾರೆ. ಜಿಲ್ಲಾಧಿಕಾರಿಗಳು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಅಬ್ದುಲ್ ಮ್ವೌಲ ಅವರ ನಿವಾಸಕ್ಕೂ ಭೇಟಿ ನೀಡಿ ಎನ್ಯೂಮರೇಷನ್ ಫಾರ್ಮ್ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., ಜಿಲ್ಲೆಯ ಪ್ರತಿಯೊಬ್ಬ ಅರ್ಹ ಮತದಾರರು ಎನ್ಯೂಮರೇಷನ್ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ ಬಿಎಲ್‌ಒಗಳಿಗೆ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು. ಇಂದಿನಿಂದ ಆರಂಭಗೊಂಡಿರುವ ಮನೆ-ಮನೆ ಭೇಟಿ ಅಭಿಯಾನವು ನಿಗದಿತ ವೇಳಾಪಟ್ಟಿಯಂತೆ ಜಿಲ್ಲೆಯಾದ್ಯಂತ ಮುಂದುವರಿಯಲಿದ್ದು, ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles