ಉಡುಪಿ : ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆ ಆಧರಿಸಿ ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸ್ವರೂಪ್ ಟಿ.ಕೆ. ಅವರು ಆಗಸ್ಟ್ 4ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಪದವಿಪೂರ್ವ ಕಾಲೇಜುಗಳು, ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಮತ್ತು ಐಟಿಐಗಳಿಗೆ ಎಂದಿನಂತೆ ತರಗತಿಗಳು ನಡೆಯಲಿದೆ.
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ. ರಜೆ ದಿನ ಶಾಲಾ–ಕಾಲೇಜುಗಳ ಮುಖ್ಯಸ್ಥರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕಡ್ಡಾಯವಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.


