Friday, July 17, 2026

spot_img

ಉಡುಪಿ ಪೊಲೀಸ್ ಇಲಾಖೆಗೆ ಕಸ್ತೂರ್ಬಾ ಆಸ್ಪತ್ರೆಯಿಂದ 45 ಆರೋಗ್ಯ ಕಿಟ್‌ಗಳ ಕೊಡುಗೆ

ಉಡುಪಿ : ಜಿಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ಆರೋಗ್ಯ ತಪಾಸಣೆಗೆ ನೆರವಾಗುವ ಉದ್ದೇಶದಿಂದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ ವತಿಯಿಂದ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ 45 ಆರೋಗ್ಯ ಕಿಟ್‌ಗಳನ್ನು ಶುಕ್ರವಾರ ಹಸ್ತಾಂತರಿಸಲಾಯಿತು. ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಐಪಿಎಸ್ ಅವರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಸ್ತೂರ್ಬಾ ಮಣಿಪಾಲ ಆಸ್ಪತ್ರೆ ಸಮೂಹದ ಪ್ರತಿನಿಧಿಗಳು ಆರೋಗ್ಯ ಕಿಟ್‌ಗಳನ್ನು ಹಸ್ತಾಂತರಿಸಿದರು.

ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳು, ಪೊಲೀಸ್ ವೃತ್ತ ಕಚೇರಿಗಳು, ಉಪ ವಿಭಾಗಾಧಿಕಾರಿಗಳ ಕಚೇರಿಗಳು, ಜಿಲ್ಲಾ ಪೊಲೀಸ್ ಕಚೇರಿ, ಜಿಲ್ಲಾ ಸಶಸ್ತ್ರ ಮೀಸಲು ಪಡೆ  ಹಾಗೂ ವಿವಿಧ ವಿಶೇಷ ಘಟಕಗಳಿಗೆ ಈ ಆರೋಗ್ಯ ಕಿಟ್‌ಗಳನ್ನು ವಿತರಿಸಲಾಯಿತು.

ಪ್ರತಿ ಆರೋಗ್ಯ ಕಿಟ್‌ನಲ್ಲಿ ಡಿಜಿಟಲ್ ರಕ್ತದೊತ್ತಡ ಪರೀಕ್ಷಾ ಯಂತ್ರ, ಡಿಜಿಟಲ್ ರಕ್ತದಲ್ಲಿನ ಸಕ್ಕರೆ ಮಟ್ಟ ಪರೀಕ್ಷಿಸುವ ಗ್ಲುಕೋಮೀಟರ್ ಹಾಗೂ ಡಿಜಿಟಲ್ ಥರ್ಮಾಮೀಟರ್ ಒಳಗೊಂಡಿವೆ. ಈ ಕಿಟ್‌ಗಳ ಮೂಲಕ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ನಿಯಮಿತವಾಗಿ ತಮ್ಮ ಆರೋಗ್ಯ ತಪಾಸಣೆ ನಡೆಸಿಕೊಳ್ಳಲು ಅನುಕೂಲವಾಗಲಿದ್ದು, ಆರೋಗ್ಯ ಕಾಳಜಿಗೆ ಇದು ಸಹಕಾರಿಯಾಗಲಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles