Thursday, April 30, 2026

spot_img

ಉಡುಪಿಯ ಶ್ರೀಕೃಷ್ಣ ದರ್ಶನ ಪಡೆದ ಕೇಂದ್ರ ಸಚಿವ ಸುರೇಶ್ ಗೋಪಿ…

ಉಡುಪಿ: ಮಲಯಾಳಂ ಚಿತ್ರರಂಗದ ಹೆಸರಾಂತ ನಟ ಹಾಗೂ ಕೇಂದ್ರ ಸಚಿವ ಸುರೇಶ್ ಗೋಪಿ ಅವರು ಕುಟುಂಬ ಸದಸ್ಯರೊಂದಿಗೆ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಶಿರೂರು ಪರ್ಯಾಯ ಸ್ವಾಗತ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಯಶ್ ಪಾಲ್ ಸುವರ್ಣ ಅವರು, ಕೇಂದ್ರ ಸಚಿವ ಸುರೇಶ್ ಗೋಪಿ ಅವರಿಗೆ ಶಿರೂರು ಪರ್ಯಾಯದ ಅಧಿಕೃತ ಆಮಂತ್ರಣ ಪತ್ರಿಕೆಯನ್ನು ನೀಡಿ ಪರ್ಯಾಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಆಹ್ವಾನಿಸಿದರು.

ಕಾರ್ಯಕ್ರಮದ ವೇಳೆ ಶಿರೂರು ಪರ್ಯಾಯ ಕೋಶಾಧಿಕಾರಿ ಜಯಪ್ರಕಾಶ್ ಕೆದ್ಲಾಯ ಹಾಗೂ ಪ್ರಧಾನ ಕಾರ್ಯದರ್ಶಿ ಮಟ್ಟಾರ್ ರತ್ನಾಕರ್ ಹೆಗ್ಡೆ ಉಪಸ್ಥಿತರಿದ್ದರು. ಶ್ರೀಕೃಷ್ಣ ಮಠದ ಪವಿತ್ರ ವಾತಾವರಣದಲ್ಲಿ ನಡೆದ ಈ ಭೇಟಿ ಭಕ್ತರು ಹಾಗೂ ಪರ್ಯಾಯ ಸಮಿತಿಯ ಸದಸ್ಯರಲ್ಲಿ ವಿಶೇಷ ಸಂತಸ ಮೂಡಿಸಿತು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles