Saturday, June 28, 2025

spot_img

ಉಡುಪಿಯಿಂದ ಹೊರಡಲಿದೆ ಕುಂಭಮೇಳಕ್ಕೆ ವಿಶೇಷ ರೈಲು..

ಉಡುಪಿ : ಕರಾವಳಿ ಭಾಗದಿಂದ ಪ್ರಯಾಗ್‌ ರಾಜ್‌ ನಲ್ಲಿ ನಡೆಯುತ್ತಿರುವ ಕುಂಭ ಮೇಳಕ್ಕೆ ತೆರಳಲು ಇಚ್ಛಿಸುವ ಭಕ್ತರಿಗೆ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಿಹಿ ಸುದ್ದಿ ನೀಡಿದ್ದಾರೆ. ಉಡುಪಿ ಯಿಂದ ನೇರವಾಗಿ ಪ್ರಯಾಗ್‌ ರಾಜ್‌ ತಲುಪಲು ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದ್ದು ಇದೇ ಫೆಭ್ರವರಿ ೧೭ರಂದು ಉಡುಪಿಯಿಂದ ಹೊರಡಲಿದೆ.

17ನೇ ತಾರೀಖು ಮಧ್ಯಾಹ್ನ 12.30ಗೆ ಉಡುಪಿಯಿಂದ ಹೊರಟ ರೈಲು 19ನೇ ತಾರೀಖಿನಂದು ಬೆಳಿಗ್ಗೆ 6.30ಗಂಟೆಗೆ ಪ್ರಯಾಗ್ ರಾಜ್ ತಲುಪಲಿದೆ. ಹಾಗೂ ಮಾರನೇ ದಿನ 20ನೇ ತಾರೀಖಿನಂದು ಸಂಜೆ 6.30ಗಂಟೆಗೆ ಪ್ರಯಾಗ್ ರಾಜ್ ನಿಂದ ಹೊರಟು 22ರಂದು ಉಡುಪಿ ತಲುಪಲಿದೆ. ಈ ರೈಲಿನಲ್ಲಿ ತೆರಳುವ ಪ್ರಯಾಣಿಕರಿಗೆ ಟಿಕೆಟ್ ವಿವರವನ್ನು ಶೀಘ್ರದಲ್ಲೇ ತಿಳಿಸಲಾಗವುದು. ಪ್ರಯಾಗ್‌ರಾಜ್ ತೆರಳಲಿರುವ ಯಾತ್ರಾರ್ಥಿಗಳು ಸಿದ್ಧತೆಗಳನ್ನು ಮಾಡಿಕೊಳ್ಳಿ. ಗೌರವಾನ್ವಿತ ಕೇಂದ್ರ ರೈಲ್ವೆ ಸಚಿವರ ಮೌಖಿಕ ಸೂಚನೆಯ ಮೇರೆಗೆ ಈ ವಿಚಾರವನ್ನು ತಮಗೆಲ್ಲರಿಗೂ ತಿಳಿಸಲು ಹರ್ಷಿಸುತ್ತೇನೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆಯಷ್ಟೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು, 144 ವರ್ಷಗಳಿಗೊಮ್ಮೆ ನಡೆಯುವ ಪ್ರಯಾಗ್ ರಾಜ್ ನ ಮಹಾ ಕುಂಭ ಮೇಳಕ್ಕೆ ತೆರಳ ಬೇಕು ಎನ್ನುವ ಅಸಂಖ್ಯಾತ ಉಡುಪಿ ,ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಭಾಗದ ಹಿಂದೂಗಳ ಆಸೆಗೆ ಪೂರಕವಾಗಿ ಉಡುಪಿಯಿಂದ ಕೊಂಕಣ ಮಾರ್ಗದಲ್ಲಿ ವಿಶೇಶ ಕುಂಭ ಮೇಳ ರೈಲು ಓಡಿಸುವಂತೆ ಗೌರವಾನ್ವಿತ ಕೇಂದ್ರ ರೈಲ್ವೇ ಸಚಿವರಾದ ಶ್ರೀ ಅಶ್ವಿನ್ ವೈಷ್ಣವ್ ಅವರ ಬಳಿ ಮನವಿ ಮಾಡಿದ್ದರು. ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಶೀಘ್ರದಲ್ಲೇ ಕುಂಭ ಮೇಳ ವಿಶೇಷ ರೈಲನ್ನು ಉಡುಪಿ ಪ್ರಯಾಗ್ ರಾಜ್ ನಡುವೆ ಓಡಿಸುವುದಾಗಿ ಭರವಸೆಯನ್ನು ನೀಡಿದ್ದರು. ಸದ್ಯ ಕರಾವಳಿಗರ ಹಾರೈಕೆ ಮತ್ತು ಕೋಟ ಅವರ ಪ್ರಯತ್ನ ಫಲವಾಗಿ ಇದೇ ಫೆಬ್ರವರಿ ೧೭ ರಂದು ವಿಶೇಷ ರೈಲು ಪ್ರಯಾಗ್‌ ರಾಜ್‌ ಮಹಾಕುಂಭಕ್ಕೆ ಹೊರಡಲಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles