Saturday, March 21, 2026

spot_img

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಏಪ್ರಿಲ್ 2ರಂದು ಕುಂದಾಪುರದಲ್ಲಿ ಉದ್ಯೋಗ ಮೇಳ

ಉಡುಪಿ : ವಿದ್ಯಾವಂತ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ 2025–2026ನೇ ಸಾಲಿನ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏಪ್ರಿಲ್ 2ರಂದು ಕುಂದಾಪುರದ ಭಂಡಾರ್ಕರ್ಸ್ ಕಾಲೇಜಿನಲ್ಲಿ ಆಯೋಜಿಸಲಾಗಿದೆ ಎಂದು ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ.

ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿ ಉಡುಪಿ ಜಿಲ್ಲಾ ಪಂಚಾಯತ್, ಕುಂದಾಪುರ ತಾಲೂಕು ಪಂಚಾಯತ್ ಹಾಗೂ ಭಂಡಾರ್ಕರ್ಸ್ ಕಾಲೇಜಿನ ಸಹಯೋಗದಲ್ಲಿ ಈ ಉದ್ಯೋಗ ಮೇಳ ನಡೆಯಲಿದೆ. ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಮೇಳದಲ್ಲಿ 50ಕ್ಕೂ ಹೆಚ್ಚು ಪ್ರತಿಷ್ಠಿತ ಖಾಸಗಿ ಸಂಸ್ಥೆಗಳು ಹಾಗೂ ಸ್ವ ಉದ್ಯೋಗ ತರಬೇತಿ ಕೇಂದ್ರಗಳು ಭಾಗವಹಿಸಲಿದ್ದು, ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳನ್ನು ಒದಗಿಸಲಿವೆ. ಆಸಕ್ತ ಅಭ್ಯರ್ಥಿಗಳು ತಮ್ಮ ಜೀವನ ಚರಿತ್ರೆ, ಆಧಾರ್ ಗುರುತಿನ ಚೀಟಿ ಹಾಗೂ ಇತ್ತೀಚಿನ ಭಾವಚಿತ್ರಗಳೊಂದಿಗೆ ನೇರವಾಗಿ ಮೇಳದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆಯುವಂತೆ ಅವರು ಮನವಿ ಮಾಡಿದರು.

ಜಿಲ್ಲೆಯ ಪ್ರತಿಭಾವಂತ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಈ ಮೇಳವನ್ನು ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಕುಂದಾಪುರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮಹೇಶ್, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ವಿಜಯ್ ಕುಮಾರ್, ಕಾಲೇಜಿನ ಪ್ರಾಂಶುಪಾಲ ಶುಭಕರಾಚಾರ್ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles