Wednesday, November 25, 2026

spot_img

ಎಚ್‌ಐವಿ/ಏಡ್ಸ್ ನಿಯಂತ್ರಣದಲ್ಲಿ ಉಡುಪಿ ಜಿಲ್ಲೆಗೆ ರಾಷ್ಟ್ರಮಟ್ಟದ ಮಾನ್ಯತೆ

ಉಡುಪಿ : ಎಚ್‌ಐವಿ/ಏಡ್ಸ್ ನಿಯಂತ್ರಣ ಮತ್ತು ಜಾಗೃತಿ ಕಾರ್ಯದಲ್ಲಿ ಗಮನಾರ್ಹ ಸಾಧನೆ ಮಾಡಿರುವ ಉಡುಪಿ ಜಿಲ್ಲೆಗೆ ರಾಷ್ಟ್ರಮಟ್ಟದ ಮಾನ್ಯತೆ ಲಭಿಸಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ (ಎನ್‌ಎಸಿಒ) ದೇಶಾದ್ಯಂತ ಹಮ್ಮಿಕೊಂಡಿರುವ ‘ಮೊಬಿಲೈಸೇಷನ್ ಫಾರ್ ಏಡ್ಸ್ ಸುರಕ್ಷಾ’ ಉಪಕ್ರಮದಡಿ ನಿಗದಿಪಡಿಸಿರುವ 95-95-95 ಗುರಿಗಳನ್ನು ಸಾಧಿಸಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಗೆ ‘ಸುರಕ್ಷಿತ್’ ಸ್ಥಾನಮಾನ ದೊರೆತಿದೆ.

 ಈ ಸಾಧನೆಗಾಗಿ ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡದ ಕಾರ್ಯವನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ರಿತು ಶರ್ಮಾ ಶ್ಲಾಘಿಸಿದ್ದಾರೆ. 2026ರ ನವೆಂಬರ್ 18ರಂದು ಹೊರಡಿಸಿರುವ ಅಧಿಕೃತ ಪತ್ರದಲ್ಲಿ ಜಿಲ್ಲೆಯ ಸಾಧನೆಯನ್ನು ಅಭಿನಂದಿಸಿ, ಅಧಿಕಾರಿಗಳ ಸಂಘಟಿತ ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್ 1ರಂದು ನವದೆಹಲಿಯ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆಯಲಿರುವ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡಕ್ಕೆ ಆಹ್ವಾನ ನೀಡಲಾಗಿದೆ. ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಸಾಧನೆಯನ್ನು ಗೌರವಿಸಲಾಗುವುದು.

ಜಿಲ್ಲೆಯಲ್ಲಿ ಎಚ್‌ಐವಿ ಸೋಂಕಿನ ನಿಯಂತ್ರಣ, ಸೋಂಕಿತರ ಆರೈಕೆ ಮತ್ತು ಚಿಕಿತ್ಸಾ ಸೇವೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಕೈಗೊಂಡ ಸಂಘಟಿತ ಪ್ರಯತ್ನಗಳಿಗೆ ರಾಷ್ಟ್ರಮಟ್ಟದಲ್ಲಿ ಗೌರವ ದೊರೆತಿರುವುದು ಆರೋಗ್ಯ ಇಲಾಖೆಗೆ ಹೆಮ್ಮೆಯ ಸಂಗತಿಯಾಗಿದೆ. ಕರ್ನಾಟಕ ರಾಜ್ಯ ಏಡ್ಸ್ ತಡೆಗಟ್ಟುವಿಕೆ ಸೊಸೈಟಿ ಹಾಗೂ ಜಿಲ್ಲಾಡಳಿತದ ಮಾರ್ಗದರ್ಶನದಲ್ಲಿ ಈ ಸಾಧನೆ ಸಾಧ್ಯವಾಗಿದೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles