Monday, June 30, 2025

spot_img

ಎರಡು ಬೈಕ್‌ ಮುಖಾಮುಖಿ ಢಿಕ್ಕಿ, ಉದ್ಯಮಿ ಸಾವು..

ಉಡುಪಿ: ಅಜ್ಜರಕಾಡು ಅಗ್ನಿ ಶಾಮಕ ದಳ ಠಾಣೆಯ ಸಮೀಪ ಸೋಮವಾರ ರಾತ್ರಿ ಎರಡು ಬೈಕುಗಳ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಸ್ಯಾಮುಯೆಲ್ ಸದಾನಂದ ಕರ್ಕಡ(59) ಎಂದು ಗುರುತಿಸಲಾಗಿದೆ.

ಅತಿ ವೇಗದಿಂದ ಬಂದ ಎರಡು ಬೈಕ್ ಗಳು ಮುಖಾಮುಖಿ ಢಿಕ್ಕಿಯಾದ ಪರಿಣಾಮ ಸದಾನಂದ ರಸ್ತೆಗೆ ಬಿದ್ದಿದ್ದರು. ಅಪಘಾತದಿಂದಾಗಿ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿ ಸ್ಯಾಮ್‌ವೆಲ್ ಕನ್ನರ್ಪಾಡಿ ನಿವಾಸಿಯಾಗಿದ್ದ ಅಪಘಾತದ ವೇಳೆ ಜೊತೆಗೆ ಇದ್ದ ಅವರ ಪತ್ನಿ ಸ್ಮೀತಾ ಕರ್ಕಡ(46) ಗಾಯಗೊಂಡು ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ಸ್ಯಾಮ್‌ವೆಲ್ ನಾಲ್ಕು ದಿನಗಳ ಹಿಂದೆಯಷ್ಟೇ ವಿದೇಶದಿಂದ ಆಗಮಿಸಿದ್ದರು.

ಮತ್ತೋರ್ವ ದ್ವಿಚಕ್ರ ಸವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಜಯಲಕ್ಷ್ಮಿ ಸಿಲ್ಕ್ಸ್ ಉದ್ಯೋಗಿ ಪುತ್ತೂರಿನ ಪವನ್ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಎರಡು ಬೈಕ್ ಗಳು ಕೂಡ ಸಂಪೂರ್ಣ ನಜ್ಜುಗುಜ್ಜಾಗಿವೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles