Friday, September 18, 2026

spot_img

ಕರಾವಳಿ ಸಚಿವ ಸಂಪುಟ ಸಭೆಯಿಂದ ಏನು ಬದಲಾವಣೆ?: ಯತ್ನಾಳ್

ಉಡುಪಿ: ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯನ್ನು ಎಲ್ಲೇ ನಡೆಸಿದರೂ ಅದರಿಂದ ಏನು ಬದಲಾವಣೆಯಾಗಲಿದೆ ಎಂದು ಪ್ರಶ್ನಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕರಾವಳಿಯ ಅಭಿವೃದ್ಧಿಗೆ ಪೂರಕವಾದ ನಿರ್ದಿಷ್ಟ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುವ ಅಗತ್ಯವಿದೆ ಎಂದು ಹೇಳಿದರು.

ಉಡುಪಿಯಲ್ಲಿ ಕರಾವಳಿಯಲ್ಲಿ ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆ ಕುರಿತು ಮಾತನಾಡಿದ ಅವರು, ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿ ನೂರಾರು, ಸಾವಿರಾರು ಕೋಟಿ ರೂ.ಗಳ ಆಶ್ವಾಸನೆಗಳನ್ನು ನೀಡಲಾಗಿತ್ತು. ಆದರೆ ಇದುವರೆಗೆ ಆ ಭಾಗದಲ್ಲಿ ನಿರೀಕ್ಷಿತ ಅಭಿವೃದ್ಧಿ ಕಾಣಿಸಿಲ್ಲ ಎಂದು ಟೀಕಿಸಿದರು. ಕರಾವಳಿಯಲ್ಲಿ ಏನೋ ಬದಲಾವಣೆ ಮಾಡಲು ಸರ್ಕಾರ ಮುಂದಾಗಿದೆ ಎಂಬ ಸಂದೇಶ ನೀಡುವ ಪ್ರಯತ್ನವಾಗಿ ಈ ಸಂಪುಟ ಸಭೆ ನಡೆಯುತ್ತಿದೆ. ಕರಾವಳಿ ಭಾಗದಲ್ಲಿ ಮತಬ್ಯಾಂಕ್ ಸೆಳೆಯುವ ಉದ್ದೇಶದಿಂದ ಸಭೆ ನಡೆಸಲಾಗುತ್ತಿದೆ ಎಂಬುದು ತಮ್ಮ ಅಭಿಪ್ರಾಯವಾಗಿದ್ದು, ಇದರಿಂದ ಕರಾವಳಿಗೆ ಯಾವುದೇ ಪ್ರಯೋಜನವಿಲ್ಲ ಎಂದು ಯತ್ನಾಳ್ ಹೇಳಿದರು.

ಕರಾವಳಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳಿವೆ. ವಿಧಾನಸಭೆಯಲ್ಲಿಯೂ ಕರಾವಳಿ ಭಾಗದ ಶಾಸಕರು ಪ್ರವಾಸೋದ್ಯಮದ ಕುರಿತು ಚರ್ಚಿಸಿದ್ದಾರೆ. ಎಲ್ಲ ಶಾಸಕರು ಒಗ್ಗಟ್ಟಿನಿಂದ ವಿಚಾರ ಪ್ರಸ್ತಾಪಿಸಿದರೂ ಈವರೆಗೆ ನಿರೀಕ್ಷಿತ ಪೂರಕ ಬೆಳವಣಿಗೆಗಳು ನಡೆದಿಲ್ಲ ಎಂದು ಹೇಳಿದರು. ಕರಾವಳಿಯಲ್ಲಿ ದೇವಾಲಯ ಪ್ರವಾಸೋದ್ಯಮ, ಕಡಲತೀರ ಪ್ರವಾಸೋದ್ಯಮ ಸೇರಿದಂತೆ ಸ್ಥಳೀಯ ವೈಶಿಷ್ಟ್ಯಗಳನ್ನು ಆಧರಿಸಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಬಹುದು. ವಿಯೆಟ್ನಾಂನಂತಹ ಸಣ್ಣ ರಾಷ್ಟ್ರಗಳು ಪ್ರವಾಸೋದ್ಯಮವನ್ನು ಆಧರಿಸಿ ಅಭಿವೃದ್ಧಿ ಸಾಧಿಸುತ್ತಿವೆ ಎಂದು ಅವರು ಹೇಳಿದರು. ಕರಾವಳಿಯ ಅಭಿವೃದ್ಧಿಗೆ ಪೂರಕವಾದ ಯೋಜನೆಗಳು, ಮೂಲಸೌಕರ್ಯ ಹಾಗೂ ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ನಿರ್ದಿಷ್ಟ ನಿರ್ಧಾರಗಳನ್ನು ಕೈಗೊಳ್ಳುವ ಬದಲು ಕೇವಲ ಸಚಿವ ಸಂಪುಟ ಸಭೆ ನಡೆಸುವುದರಿಂದ ಪ್ರಯೋಜನವಿಲ್ಲ. ಸಭೆಯಲ್ಲಿ ಕೈಗೊಳ್ಳುವ ನಿರ್ಧಾರಗಳಿಗೆ ಅಗತ್ಯ ಅನುದಾನ ಮತ್ತು ಅನುಷ್ಠಾನದ ವ್ಯವಸ್ಥೆಯೂ ಇರಬೇಕು ಎಂದು ಯತ್ನಾಳ್ ಆಗ್ರಹಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles