Monday, March 2, 2026

spot_img

ಕಲ್ಸಂಕದಲ್ಲಿ ಭೀಕರ ರಸ್ತೆ ಅಪಘಾತ: ಸ್ಕೂಟರ್ ಸವಾರ ಯುವಕ ಮೃತ್ಯು

ಉಡುಪಿ: ಕಲ್ಸಂಕ ಜಂಕ್ಷನ್ ಸಮೀಪದ ಪಾಕಶಾಲೆ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಟೈನರ್ ಲಾರಿ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮೃತರನ್ನು ಮಣಿಪಾಲ ನಿವಾಸಿ ಅವಿನಾಶ್ (19) ಎಂದು ಗುರುತಿಸಲಾಗಿದೆ. ಉಡುಪಿಯಿಂದ ಮಣಿಪಾಲದ ಕಡೆಗೆ ಸಾಗುತ್ತಿದ್ದ ಕಂಟೈನರ್ ಲಾರಿಯು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾರೆ.

ಈ ವೇಳೆ ಲಾರಿಯ ಚಕ್ರ ತಲೆಯ ಮೇಲೆ ಹರಿದ ಪರಿಣಾಮ ಅವಿನಾಶ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ಪಡೆದ ಉಡುಪಿ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸಲು ಸಹಕರಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles