ಕಾಪು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು,ಕಾಪು ಪುರಸಭೆ ಎದುರು ನೂತನವಾಗಿ ನಿರ್ಮಿಸಲಾಗಿರುವ ಇಂದಿರಾ ಕ್ಯಾಂಟೀನ್ ಅನ್ನು ಉದ್ಘಾಟಿಸಿದರು.

ಈ ವೇಳೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಶೋಕ್ ಕೊಡವೂರು, ಎಂ.ಎ.ಗಫೂರ್ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.
