Tuesday, March 3, 2026

spot_img

ಕಾರ್ಕಳ ರಸ್ತೆ ಅಪಘಾತ: ಬಸ್‌ ಚಾಲಕನಿಗೆ ಲೋ-ಬಿಪಿ, ನಿಂತಿದ್ದ ರಿಕ್ಷಾಗೆ ಡಿಕ್ಕಿ

ಉಡುಪಿ : ಕಾರ್ಕಳ ಉಚ್ಚಂಗಿ ಮಾರಿಯಮ್ಮ ದೇವಸ್ಥಾನದ ಬಳಿ ಗುರುವಾರ ಅಕಸ್ಮಿಕ ರಸ್ತೆ ಅಪಘಾತ ಸಂಭವಿಸಿದ್ದು, ಬಸ್‌ ಚಾಲಕನಿಗೆ ಏಕಾಏಕಿ ಲೋ ಬಿಪಿ ಉಂಟಾದ ಪರಿಣಾಮ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಮಾಹಿತಿ ಪ್ರಕಾರ, ರಿಕ್ಷಾ ಚಾಲಕರು ತಮ್ಮ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಒಳಗಡೆ ಕುಳಿತಿದ್ದರು. ಇದೇ ವೇಳೆ ನಿಯಂತ್ರಣ ತಪ್ಪಿದ ಬಸ್ ನೇರವಾಗಿ ರಿಕ್ಷಾಗೆ ಡಿಕ್ಕಿಯಾದುದರಿಂದ ರಿಕ್ಷಾ ಚಾಲಕರಿಗೆ ತಲೆ, ಕೈ ಮತ್ತು ಕಾಲುಗಳಿಗೆ ಗಾಯಗಳಾಗಿದೆ ಎಂದು ಮೂಲಗಳು ತಿಳಿಸಿವೆ.

ಅಪಘಾತದ ಸಮಯದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯೊಬ್ಬಳಿಗೂ ಸಣ್ಣಪುಟ್ಟ ಗಾಯಗಳು ಆಗಿದ್ದು, ಸ್ಥಳೀಯರು ತಕ್ಷಣ ಸ್ಫಂದಿಸಿ ಬಸ್‌ ಚಾಲಕ ಹಾಗೂ ರಿಕ್ಷಾ ಚಾಲಕ ಇಬ್ಬರನ್ನೂ ಸಮೀಪದ ಆಸ್ಪತ್ರೆಗೆ ಸೇರಿಸಿದ್ದಾರೆ. ಪೊಲೀಸರು ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles