Wednesday, September 2, 2026

spot_img

ಕಾರ್ಕಳದಲ್ಲಿ ಕಾಂಗ್ರೆಸ್ ಪ್ರತಿಭಟನೆ; ಶಾಸಕ ಸುನಿಲ್ ಕುಮಾರ್ ಕಚೇರಿ ಮುಂದೆ ಪ್ರತಿಭಟನೆ

ಉಡುಪಿ: ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಪ್ರತಿಭಟನೆ ವೇಳೆ ಶಾಸಕ ಕಚೇರಿ ಮುಂದೆ ಕೆಲಕಾಲ ಹೈಡ್ರಾಮಾ ನಡೆಯಿತು. ಕಳಂಕಿತ ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆದಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆಯಾಗಿ ಕಾರ್ಕಳದಲ್ಲೂ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಪರಶುರಾಮ ಥೀಂ ಪಾರ್ಕ್ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಾಗೂ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿ ಶಾಸಕ ಸುನಿಲ್ ಕುಮಾರ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾಕಾರರು ಶಾಸಕ ಸುನಿಲ್ ಕುಮಾರ್ ಅವರ ಕಚೇರಿ ಹಾಗೂ ನಿವಾಸಕ್ಕೆ ಪೋಸ್ಟರ್ ಮತ್ತು ಸ್ಟಿಕರ್ ಅಂಟಿಸಲು ಮುಂದಾದರು. ಬಳಿಕ ಕಚೇರಿಗೆ ನುಗ್ಗಲು ಯತ್ನಿಸಿದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ತಡೆದರು. ರಸ್ತೆಯಲ್ಲೇ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಈ ವೇಳೆ ಶಾಸಕ ಕಚೇರಿ ಮುಂಭಾಗದಲ್ಲಿ ಪರ-ವಿರೋಧ ಘೋಷಣೆಗಳು ಮೊಳಗಿದ್ದು, ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಕಾರ್ಕಳದಲ್ಲಿ ನಿರ್ಮಿಸಲಾಗಿರುವ ಪರಶುರಾಮ ಥೀಂ ಪಾರ್ಕ್ ಕಾಮಗಾರಿಯಲ್ಲಿ ದೊಡ್ಡ ಮಟ್ಟದ ಅಕ್ರಮ ಹಾಗೂ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳು ಈ ಹಿಂದಿನಿಂದಲೂ ಕೇಳಿಬರುತ್ತಿವೆ. ಇದೇ ವಿಚಾರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಕಾರ್ಯಕರ್ತರು ಶಾಸಕರ ರಾಜೀನಾಮೆಗೆ ಒತ್ತಾಯಿಸಿದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಶಾಸಕ ಕಚೇರಿ ಸುತ್ತಮುತ್ತ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಬಂದೋಬಸ್ತ್ ಕೈಗೊಂಡಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles