Sunday, May 31, 2026

spot_img

ಕಿನ್ನಿಮೂಲ್ಕಿಯಲ್ಲಿ ಭೀಕರ ಅಪಘಾತ: ಗೂಡ್ಸ್ ಟೆಂಪೋ ಚಾಲಕ ಸ್ಥಳದಲ್ಲೇ ಸಾವು

ಉಡುಪಿ : ರಾಷ್ಟ್ರೀಯ ಹೆದ್ದಾರಿ 66ರ ಕಿನ್ನಿಮೂಲ್ಕಿ ಸಮೀಪ ರವಿವಾರ ನಸುಕಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗೂಡ್ಸ್ ಟೆಂಪೋ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಶಿವಮೊಗ್ಗ ಮೂಲದ ಪ್ರಶಾಂತ್ ಪಿ. (29) ಎಂದು ಗುರುತಿಸಲಾಗಿದೆ.

ಲಭ್ಯ ಮಾಹಿತಿಯ ಪ್ರಕಾರ, ಸರಕು ಸಾಗಾಟ ಲಾರಿಯ ಹಿಂಭಾಗಕ್ಕೆ ಗೂಡ್ಸ್ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ರಸ್ತೆ ಬದಿಯಲ್ಲಿ ಅಥವಾ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಟೆಂಪೋ ಹಿಂಬದಿಯಿಂದ ಡಿಕ್ಕಿ ಹೊಡೆದಿರಬಹುದೆಂದು ಶಂಕಿಸಲಾಗಿದೆ.

ಡಿಕ್ಕಿಯ ತೀವ್ರತೆಗೆ ಟೆಂಪೋದ ಮುಂಭಾಗ ಸಂಪೂರ್ಣ ಜಜ್ಜಿಹೋಗಿದ್ದು, ಚಾಲಕ ವಾಹನದೊಳಗೆ ಸಿಲುಕಿಕೊಂಡಿದ್ದರು. ಘಟನಾ ಸ್ಥಳಕ್ಕೆ ಧಾವಿಸಿದ ಸಂಚಾರಿ ಠಾಣೆ ಪೊಲೀಸರು, ಸಮಾಜಸೇವಕ ನಿತ್ಯಾನಂದ ಒಳಕಾಡು ಹಾಗೂ ಸ್ಥಳೀಯರ ಸಹಕಾರದಿಂದ ಮೃತದೇಹವನ್ನು ಹೊರತೆಗೆದರು.

ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತು. ಮೃತದೇಹವನ್ನು ಆಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರದಲ್ಲಿ ಇರಿಸುವ ವ್ಯವಸ್ಥೆಯನ್ನು ನಿತ್ಯಾನಂದ ಒಳಕಾಡು ಮಾಡಿಕೊಟ್ಟರು. ಘಟನೆ ಸಂಬಂಧ ಉಡುಪಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles