Friday, March 6, 2026

spot_img

ಕುಂದಾಪುರ ಕ್ಷೇತ್ರದ ಗ್ರಾಮೀಣ ಭಾಗಗಳಿಗೆ ಕೆಎಸ್ಆರ್ಟಿಸಿ ಬಸ್ ಸೇವೆ ಆರಂಭ..

ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಸುಗಮ ಸಾರಿಗೆ ಸೌಲಭ್ಯ ಒದಗಿಸುವ ಉದ್ದೇಶದಿಂದ ಕೆಎಸ್ಆರ್ಟಿಸಿ ಬಸ್ ಸೇವೆಯನ್ನು ಆರಂಭಿಸಲಾಗಿದೆ. ಕೋಟ ಹೈಸ್ಕೂಲ್ ಮಾರ್ಗವಾಗಿ ಸೈಬ್ರಕಟ್ಟೆ, ಗೋಳಿ ಅಂಗಡಿ ಮೂಲಕ ಸಂಚರಿಸುವ ಈ ಹೊಸ ಬಸ್‌ಗೆ ಸೋಮವಾರ ಕುಂದಾಪುರ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಚಾಲನೆ ನೀಡಿದರು.

ಈ ಮಾರ್ಗದಲ್ಲಿ ಬಸ್ ಸೇವೆಯ ಕೊರತೆಯಿಂದ ಶಾಲಾ ಮಕ್ಕಳು, ಉದ್ಯೋಗಸ್ಥರು ಹಾಗೂ ಗ್ರಾಮೀಣ ಭಾಗದ ಸಾರ್ವಜನಿಕರು ದಿನನಿತ್ಯದ ಪ್ರಯಾಣಕ್ಕೆ ತೊಂದರೆ ಅನುಭವಿಸುತ್ತಿದ್ದರು.

ಸ್ಥಳೀಯರ ಬೇಡಿಕೆಗೆ ಸ್ಪಂದಿಸಿ ಈ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಇದರಿಂದ ಶಿಕ್ಷಣ ಸಂಸ್ಥೆಗಳಿಗೆ ತೆರಳುವ ವಿದ್ಯಾರ್ಥಿಗಳು ಮತ್ತು ಅಗತ್ಯ ಕೆಲಸಗಳಿಗೆ ನಗರಕ್ಕೆ ಸಂಚರಿಸುವ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಶಾಸಕರು ಹೇಳಿದರು.

ಕಾರ್ಯಕ್ರಮದ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಸಾರ್ವಜನಿಕರು ಹಾಗೂ ಕೆಎಸ್ಆರ್ಟಿಸಿ ಸಿಬ್ಬಂದಿ ಉಪಸ್ಥಿತರಿದ್ದು, ಬಸ್ ಸೇವೆ ಆರಂಭವಾದುದಕ್ಕೆ ಸಂತಸ ವ್ಯಕ್ತಪಡಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles