Sunday, September 27, 2026

spot_img

ಕುಂದಾಪುರದ ನೂತನ ವಾಲಿಬಾಲ್ ಕೋರ್ಟ್ ವೀಕ್ಷಿಸಿದ ಜಿಲ್ಲಾಧಿಕಾರಿ, ಶಾಸಕರು

ಉಡುಪಿ : ಕುಂದಾಪುರದ ಗಾಂಧಿ ಮೈದಾನದಲ್ಲಿ ನೂತನವಾಗಿ ನಿರ್ಮಾಣಗೊಂಡು ಉದ್ಘಾಟನೆಗೊಂಡಿರುವ ವಾಲಿಬಾಲ್ ಕೋರ್ಟ್‌ಗೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹಾಗೂ ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಭೇಟಿ ನೀಡಿ ವೀಕ್ಷಣೆ ನಡೆಸಿದರು.

ಕೋರ್ಟ್‌ನ ಗುಣಮಟ್ಟ ಹಾಗೂ ಸೌಲಭ್ಯಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು, ಉತ್ತಮ ಗುಣಮಟ್ಟದಲ್ಲಿ ಕೋರ್ಟ್ ನಿರ್ಮಾಣಗೊಂಡಿದ್ದು, ಕ್ರೀಡಾಪಟುಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಕುಂದಾಪುರದ ಯುವಕರಲ್ಲಿ ವಾಲಿಬಾಲ್ ಕ್ರೀಡೆಯ ಬಗ್ಗೆ ಅಪಾರ ಆಸಕ್ತಿಯಿದೆ. ನೂತನವಾಗಿ ನಿರ್ಮಾಣಗೊಂಡಿರುವ ಅತ್ಯಾಧುನಿಕ ಕೋರ್ಟ್ ಸ್ಥಳೀಯ ಕ್ರೀಡಾಪಟುಗಳಿಗೆ ಉತ್ತಮ ವೇದಿಕೆಯಾಗಲಿದೆ. ಯುವಕರು ಈ ಸೌಲಭ್ಯವನ್ನು ಬಳಸಿಕೊಂಡು ಕ್ರೀಡೆಯಲ್ಲಿ ಹೆಚ್ಚಿನ ಸಾಧನೆ ಮಾಡಬೇಕು ಎಂದು ಆಶಿಸಿದರು.

ಈ ಸಂದರ್ಭದಲ್ಲಿ ವಾಲಿಬಾಲ್ ಮಾಜಿ ಆಟಗಾರ ರಾಜೇಶ್ ಕಾವೇರಿ, ಸುನೀಲ್ ಶೆಟ್ಟಿ ಹೇರಿಕುದ್ರು, ಪುರಸಭೆಯ ಮಾಜಿ ಸದಸ್ಯ ಸಂತೋಷ್ ಶೆಟ್ಟಿ, ಶಾಸಕರ ಆಪ್ತ ಕಾರ್ಯದರ್ಶಿ ಮಹಿಮ ಶೆಟ್ಟಿ ಕೆ., ರೋಷನ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles